ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವು ಗುರುವಾರ ಜರುಗಿತು.
ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆರ್.ವಿ.ದೇಶಪಾಂಡೆಯವರು ಮಗುವಿನ ವ್ಯಕ್ತಿತ್ವ ಮತ್ತು ಶೈಕ್ಷಣಿಕ ಉನ್ನತಿಗೆ ಅಂಗನವಾಡಿ ಕೇಂದ್ರಗಳು ಮೊದಲ ಮೆಟ್ಟಿಲು. ಈ ನಿಟ್ಟಿನಲ್ಲಿ ಕ್ಷೇತ್ರದಾ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ವಿಶೇಷ ಒತ್ತು ನೀಡಿ ಕಾರ್ಯನಿರ್ವಹಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಗನವಾಡಿ ಕೇಂದ್ರಗಳ ಕಟ್ಟಡಗಳು ನಿರ್ಮಾಣಗೊಂಡಿದೆ. ಮಗುವಿನ ಶೈಕ್ಷಣಿಕ ಉನ್ನತಿಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವಪೂರ್ಣವಾಗಿದೆ. ನೂತನ ಅಂಗನವಾಡಿ ಕೇಂದ್ರವು ಈ ಭಾಗದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರೇರಣೆಯಾಗಲಿ ಎಂದು ಶುಭವನ್ನು ಹಾರೈಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ನಗರ ಸಭೆಯ ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಿಕಟಪೂರ್ವ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ನಗರಸಭೆಯ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರು, ಸಿಡಿಪಿಓ ಡಾ.ಲಕ್ಷ್ಮೀದೇವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್ ಹೆಗಡೆ, ಕಾಂಗ್ರೆಸ್ ಮುಖಂಡರುಗಳಾದ ಮುನ್ನಾ ವಹಾಬ್, ಬಸೀರ್ ಗಿರಿಯಾಳ, ಕಾಂಗ್ರೆಸ್ ಮುಖಂಡರು ನಗರಸಭೆಯ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.