ಹಳಿಯಾಳ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಳಿಯಾಳ ಇವರ ಆಶ್ರಯದಡಿ ದಾಂಡೇಲಿ ತಾಲೂಕಿನ ಆಲೂರು ಗ್ರಾಮ ಪಂಚಾಯ್ತಿಯ ಕೇರವಾಡ ಗ್ರಾಮದಲ್ಲಿ ಮನೆ ಮನೆಗೆ ನೀರು ಸಂಪರ್ಕ ಕಾಮಗಾರಿಗೆ ಗುರುವಾರ ಶಾಸಕ ಆರ್.ವಿ.ದೇಶಪಾಂಡೆಯವರು ಚಾಲನೆಯನ್ನು ನೀಡಿದರು.
ಗ್ರಾಮೀಣ ಭಾಗದಲ್ಲಿ ಕ್ರಿಯಾತ್ಮಕ ಮನೆಯ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಜಿಲ್ಲಾಪಂಚಾಯತ್ ಕಾರವಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಳಿಯಾಳ ಇವರ ಆಶ್ರಯದಲ್ಲಿ 2022-23 ನೇ ಸಾಲಿನ ಜಲ ಜೀವನ ಮಿಷನ್ ಯೋಜನೆಯಡಿ ದಾಂಡೇಲಿ ತಾಲೂಕಿನ ಕೇರವಾಡ ಗ್ರಾಮದಲ್ಲಿ 150 ಜನ ವಸತಿ ಮನೆಗಳಿಗೆ ಪೈಪ್ ಲೈನ್ ಅಳವಡಿಸಿ ನಳ ಸಂಪರ್ಕ್ ಮೂಲಕ ನೀರು ಪೂರೈಸುವ ಕಾಮಗಾರಿಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಭೂಮಿ ಪೂಜೆ ಕೈಗೊಂಡು ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಹಳಿಯಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.