ಹೊನ್ನಾವರ : ತಾಲೂಕಿನ ಚಂದಾವರದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸಂಜೀವಿನಿ ಮಾರ್ಟ್‌ನ್ನು ಕುಮಟಾ-ಹೊನ್ನಾವರ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದ್ರು..
ತಾಲೂಕಿನ ಚಂದಾವರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಗ್ರಾ. ಪಂ. ಚಂದಾವರ ಹಾಗೂ ಸಂಜೀವಿನಿ ಒಕ್ಕೂಟಗಳ ಆಶ್ರಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸಂಜೀವಿನಿ ಮಾರ್ಟ್‌ನ್ನು ಕುಮಟಾ-ಹೊನ್ನಾವರ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದ್ರು..
ಮಳಿಗೆ ಉದ್ಘಾಟಿಸಿ ಮಾತನಾಡಿದ ಶಾಸಕ ದಿನಕರ ಶೆಟ್ಟಿ, ಸ್ವ ಸಹಾಯ ಸಂಘಗಳು ಮಹಿಳಾ ಸಬಲೀಕರಣದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು ಸಂಜೀವಿನಿ ಮಾರ್ಟ್ ನಿರ್ಮಾಣ ಮಾಡಿದೆ. ಇದರಿಂದ ಸ್ವ ಸಹಾಯ ಸಂಘದ ಸದಸ್ಯರು ಉತ್ಪಾದನೆ ಮಾಡುವ ವಸ್ತುಗಳ ಮಾರಾಟಕ್ಕೆ ಅನುಕೂಲವಾಗುತ್ತದೆ. ತನ್ಮೂಲಕ ಸ್ವ ಸಹಾಯ ಸಂಘದ ಸದಸ್ಯರು ಆರ್ಥಿಕವಾಗಿ ಸ್ವಾವಲಂಭಿಗಳಾಗುವುದು ಸಾಧ್ಯವಾಗುತ್ತದೆ ಎಂದರು.ಈ ವೇಳೆ ಚಂದಾವರ ಗ್ರಾ. ಪಂ. ಅಧ್ಯಕ್ಷೆ ಪ್ರೇಮಾ ಮೋಹನ ನಾಯ್ಕ, ಉಪಾಧ್ಯಕ್ಷೆ ನಿರ್ಮಲಾ ಡಯಾಸ್, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ್, ದಿವಗಿ ಗ್ರಾ. ಪಂ. ಅಧ್ಯಕ್ಷ ಜಗದೀಶ ಭಟ್, ಚಂದಾವರ ಗ್ರಾ. ಪಂ. ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ರು..