ಶಿರಸಿ : ಜೊಯಿಡಾದ ರಾಮನಗರದಲ್ಲಿ ನಡೆದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರಿಡಾಕೂಟದಲ್ಲಿ ಶಿರಸಿಯ ಶಾಸಕರ ಸರಕಾರಿ ಮಾದರಿ ಶಾಲೆಯ ವಿದ್ಯಾರ್ಥಿಗಳು ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ…
ಜಿಲ್ಲಾ ಪಂಚಾಯತ ಉತ್ತರ ಕನ್ನಡ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊಯಿಡಾ ಸಂಯುಕ್ತಾಶ್ರಯದಲ್ಲಿ ಜೊಯಿಡಾದ ರಾಮನಗರದಲ್ಲಿ ನಡೆದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರಿಡಾಕೂಟದಲ್ಲಿ ಶಿರಸಿಯ ಶಾಸಕರ ಸರಕಾರಿ ಮಾದರಿ ಶಾಲೆಯ ವಿದ್ಯಾರ್ಥಿಗಳು ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ ಶಾಲೆಯನ್ನು ಪ್ರತಿನಿಧಿಸಿದ್ದ ಶಿವಾಜಿ ಶಿಂದೆ, ಅಶ್ವಥ ಗೌಡ, ಶುಭಂ ನಾಯ್ಕ ಹಾಗೂ ರಿತೇಶ್ ಪಡ್ತಿ ಇವರುಗಳು ನಾಲ್ಕು ನೂರು ಮೀಟರ್ ರಿಲೇ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಉಡುಪಿಯ ಅಜ್ಜರ ಕಾಡುವಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಶಿವಾಜಿ ಶಿಂದೆ 100 ಮೀ. ಓಟದಲ್ಲಿ ದ್ವಿತಿಯ ಸ್ಥಾನ ಪಡೆದು ವಯಕ್ತಿಕವಾಗಿಯೂ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾನೆ
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಶೈಲ ಚಿಗರಿ ಹಾಗೂ ಸಿಬ್ಬಂದಿಗಳು ಮತ್ತು ಶಾಲೆಯ ಎಸ್.ಡಿ.ಎಮ್.ಸಿ. ಸದಸ್ಯರು ಸಂತೋಷ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಸುರೇಖಾ ಆಗೇರ ತರಬೇತಿ ನೀಡಿದ್ದರು…