ಸಿದ್ದಾಪುರ ತಾಲೂಕಿನ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಶುಕ್ರವಾರ ಎಲೆಚುಕ್ಕಿ ರೋಗ ಕುರಿತು ವಿಚಾರ ಸಂಕಿರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಿದ್ದಾಪುರ ತಾಲೂಕಿನ ತಾಲೂಕಿನ ವಾಜಗದ್ದೆಯ ದುರ್ಗಾ ವಿನಾಯಕ ಸಭಾಭವನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಶುಕ್ರವಾರ ಎಲೆಚುಕ್ಕಿ ರೋಗ ಕುರಿತು ವಿಚಾರ ಸಂಕಿರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಪಾರಂಪರಿಕವಾಗಿ ಬೆಳೆಯುತ್ತಿರುವ ಅಡಿಕೆ ಬೆಳೆಯನ್ನು ಉಳಿಸಿಕೊಳ್ಳುವುದೇ ಸವಾಲಾಗಿದೆ. ತಜ್ಞರ ಸಲಹೆ ಪಡೆದು ತೋಟವನ್ನು ಸಂರಕ್ಷಿಸಿಕೊಳ್ಳಬೇಕಾಗಿದೆ. ರೈತರು ಧೃತಿಗೆಡದೇ ಇರುವಂತೆ ನೋಡಿಕೊಳ್ಳಬೇಕಾದದ್ದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ತೆರಳಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವಂತೆ ಶಾಸಕ ಭೀಮಣ್ಣ ನಾಯ್ಕ ಹೇಳಿದ್ರು..
ಈ ವೇಳೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು , ರೈತರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ರು..