ನ್ಯೂ ಇಂಗ್ಲೀಷ್‌ ಸ್ಕೂಲ್‌ನಲ್ಲಿ ಗಣೇಶನ ಪೌರಾಣಿಕ ಕಥಾಧಾರಿತ ಚಿತ್ರ ಬಿಡಿಸುವ ಸ್ಪರ್ಧೆ

ಹೊನ್ನಾವರ ದ ನ್ಯೂ ಇಂಗ್ಲೀಷ್‌ ಸ್ಕೂಲ್‌ನಲ್ಲಿ ಶಾಲಾ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಗಣೇಶನ ಪೌರಾಣಿಕ ಕಥಾಧಾರಿತ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು..

ಹೊನ್ನಾವರದ ನ್ಯೂ ಇಂಗ್ಲೀಷ್‌ ಸ್ಕೂಲ್‌ನಲ್ಲಿ ಶಾಲಾ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಗಣೇಶನ ಪೌರಾಣಿಕ ಕಥಾಧಾರಿತ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು..

ನ್ಯೂ ಇಂಗ್ಲಿಷ್ ಸ್ಕೂಲ್ ನ ಈ ಕಾರ್ಯಕ್ರಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಾ ಕೌಶಲ್ಯವನ್ನು ಗುರುತಿಸುವ ವಿಶಿಷ್ಟ ಕಾರ್ಯಕ್ರಮ ಎಂದು ಹೇಳಿದ್ರು. ವಿದ್ಯಾರ್ಥಿಗಳನ್ನು ಹುರಿದುಂಬಿಸಿದ ಶಿಕ್ಷಕರಿಗೂ ಪ್ರಶಂಸಾ ಪತ್ರ ನೀಡಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳ ಕಲಾ ಪ್ರತಿಭೆಯನ್ನು ಫೋಷಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಉದಯ ನಾಯ್ಕ ಹೇಳಿದ್ರು..

ಸ್ಪರ್ಧೆಯಲ್ಲಿ ಭಾಗವಹಿಸಿದ್ದ 17 ವಿವಿಧ ಹಿ.ಪ್ರಾ ಶಾಲೆಗಳ 175 ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯ್ತು. ಕಾರ್ಯಕ್ರಮದಲ್ಲಿ ನ್ಯೂ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ರಘುನಾಥ. ಪೈ , ಶಾಲಾ ಮುಖ್ಯೋಪಾಧ್ಯಾಯ ಜಯಂತ ನಾಯಕ, ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಉಪಸ್ಥಿತರಿದ್ರು..