ರಕ್ತದಾನ ಮಾಡಿ ಇನ್ನೊಬ್ಬರ ಜೀವವನ್ನು ಉಳಿಸಿ :ಡಾ.ವಿಜಯಕುಮಾರ್ ಕೊಚ್ಚರಗಿ ಕರೆ

ಜೋಯಿಡಾ : ರಕ್ತದಾನ ಅತ್ಯಂತ ಶ್ರೇಷ್ಠದಾನ. ರಕ್ತದಾನ ಮಾಡಿ ಇನ್ನೊಬ್ಬರ ಜೀವವನ್ನು ಉಳಿಸಿ ಎಂದು ಜೋಯಿಡಾ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಿಜಯಕುಮಾರ್ ಕೊಚ್ಚರಗಿ ಅವರು ಕರೆ ನೀಡಿದರು.

ಅವರು ಜೋಯಿಡಾ ತಾಲೂಕು ಕೇಂದ್ರದಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೇನ್ಸನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಜೋಯಿಡಾ , ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕಾರವಾರ, ತಾಲೂಕಾ ಆಸ್ಪತ್ರೆ ಜೋಯಿಡಾ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದಿನ ಯುವಕರು ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಇನ್ನೊಬ್ಬರ ಜೀವ ಕಾಪಾಡಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರತಿ ವರ್ಷ ರಕ್ತದಾನ ಮಾಡುತ್ತಾ ಬಂದಿರುವ ಮಂಜುನಾಥ ಶೆಟ್ಟಿ, ರೂಪೇಶ ಚೌಗುಲೆ ಅವರನ್ನು ಸನ್ಮಾನಿಸಲಾಯಿತು. ಜೋಯಿಡಾ ಪಿ.ಎಸ್ ಐ ಮಹೇಶ ಮಾಳಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ನೀಡಿ ರಕ್ತದಾನದ ಜಾಗೃತಿಯನ್ನು ಮೂಡಿಸಿದರು.

ಈ ಸಂದರ್ಭದಲ್ಲಿ ಜೋಯಿಡಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ ದೇಸಾಯಿ, ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯ ಘಟಕದ ಪ್ರಧಾನ‌ ಕಾರ್ಯದರ್ಶಿ ರವಿ ರೇಡ್ಕರ್, ಕಾಲೇಜಿನ ಪ್ರಾಚಾರ್ಯ ರವಿಕುಮಾರ್ ಡಿ, ಆರೋಗ್ಯ ಇಲಾಖೆಯ ವಾಸುದೇವ ಕಿತ್ತೂರ, ಕೆನರಾ ಬ್ಯಾಂಕ್ ದೇಶಪಾಂಡೆ ಯಾರ್ ಸಿಟಿ ಸಂಸ್ಥೆಯ ಯೋಜನಾಧಿಕಾರಿ ಅಶೋಕ್ ಸೂರ್ಯವಂಶಿ ಮೇಲ್ವಿಚಾರಕರಾದ ನಾರಾಯಣ ವಾಡಕರ್ , ಸಂತೋಷ್ ಮೋರಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಸಂದೇಶ ಜೈನ್‌ ನುಡಿಸಿರಿ ನ್ಯೂಸ್‌ ಜೊಯಿಡಾ