ಹವಗಿಯ ಶ್ರೀ. ಪಾರ್ಶ್ವನಾಥ ದಿಗಂಬರ ಬಸದಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಶೇಷ ಪೂಜಾ ಕಾರ್ಯಕ್ರಮ

ಹಳಿಯಾಳ : ತಾಲೂಕಿನ ಹವಗಿಯಲ್ಲಿರುವ ಶ್ರೀ ಪಾರ್ಶ್ವನಾಥ ದಿಗಂಬರ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜೈನ ಶ್ರಾವಕಿಯರು ಸಾಮೂಹಿಕವಾಗಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾಮೂಹಿಕ ನಮೋಕಾರ ಮಂತ್ರ ಪಠಣೆ ಮತ್ತು ಜಿನ ಭಜನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಶ್ರೀ. ಪಾರ್ಶ್ವನಾಥ ದಿಗಂಬರ ಬಸದಿಯ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮಿಸಿದ್ದರು.