ಹಳಿಯಾಳ ತಾಲೂಕಿನ ಗುಂಡೊಳ್ಳಿ‌ & ಸಾಂಬ್ರಾಣಿಯಲ್ಲಿ ಅನಧಿಕೃತವಾಗಿ ಮಧ್ಯ ಸೇವನೆಗೆ ಅವಕಾಶ : ಎರಡು ಕಡೆ ಪ್ರಕರಣ ದಾಖಲು

ಹಳಿಯಾಳ‌ : ತಾಲೂಕಿನ ಗುಂಡೊಳ್ಳಿ ಮತ್ತು ಸಾಂಬ್ರಾಣಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಸಾರ್ವಜನಿಕರಿಗೆ ಮುಕ್ತವಾಗಿ ಮಧ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ಪ್ರತ್ಯೇಕ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾದ ಘಟನೆ ನಡೆದಿದೆ.

ತಾಲೂಕಿನ ಗುಂಡೊಳ್ಳಿ ಗ್ರಾಮದ ತಾಲೂಕಿನ ಕೊಪ್ಪ ಕ್ರಾಸ್ ಹತ್ತಿರ ಇರುವ ಕಿರಾಣಿ ಅಂಗಡಿಯಲ್ಲಿ ಸಂತೋಷ್ ನಾರಾಯಣ ಡುಮಗೋಳಕರ ಎಂಬಾತನು ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮುಕ್ತವಾಗಿ ಮಧ್ಯ ಸೇವನೆ ಮಾಡಲು ಅವಕಾಶ ನೀಡಿದ ಸಂದರ್ಭದಲ್ಲಿ ಪಿಎಸ್ಐ ವಿನೋದ್ ಎಸ್ ಕೆ ಅವರ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಸಂತೋಷ್ ನಾರಾಯಣ ಡುಮಗೋಳ್ಕರ್ ಎಂಬಾತನ ಮೇಲೆ ಅಬಕಾರಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

ತಾಲೂಕಿನ ಸಾಂಬ್ರಾಣಿ ಗ್ರಾಮದಲ್ಲಿ ಸ್ಥಳೀಯ ನಿವಾಸಿ ಮಧುಕರ ಶಂಕರ್ ಕಲಾಲ್ ಎಂಬಾತನು ತನ್ನ ಗೂಡಂಗಡಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಧ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟಿರುವ ಸಂದರ್ಭದಲ್ಲಿ ತನಿಖಾ ವಿಭಾಗದ ಪಿಎಸ್ಐ ಅಮೀನ್ ಅತ್ತಾರ ಅವರ ನೇತೃತ್ವದ ತಂಡ ದಾಳಿ ಮಾಡಿದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಮಧುಕರ ಶಂಕರ್ ಕಲಾಲ್ ಎಂಬಾತನ ಮೇಲೆ ಅಬಕಾರಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.