ದಾಂಡೇಲಿ :- ತಾಲೂಕಿಗೆ ಗುರುವಾರ ಲೋಕಾಯುಕ್ತ ಅಧಿಕಾರಿ ಎಸ್.ಪಿ ಕುಮಾರಚಂದ ಭೇಟಿ ದಾಂಡೇಲಿ ಹಾಗೂ ಹಳಿಯಾಳ ತಾಲೂಕಿನ ವಿವಿಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ರು…
ಈ ವೇಳೆ ಲೋಕಾಯುಕ್ತ ಎಸ್.ಪಿ ಕುಮಾರಚಂದ್ ಮಾತನಾಡಿ, ಆಡಳಿತ ಯಂತ್ರದಲ್ಲಿರುವ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಧಿಕಾರಶಾಹಿ ಅಶಿಸ್ತಿನಂತಹ ಪ್ರಕರಣಗಳೂ ಸೇರಿದಂತೆ ಆಡಳಿತಾತ್ಮಕ ಕ್ರಮಗಳ ವಿರುದ್ಧದ ದೂರುಗಳನ್ನು ಪರಿಶೀಲನೆ ಮಾಡಿ ಸಾರ್ವಜನಿಕ ಆಡಳಿತದ ಮಾನದಂಡಗಳನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದ್ರು…
ಸರ್ಕಾರದ ಪ್ರತಿ ಇಲಾಖೆಯಲ್ಲಿಯೂ ಪ್ರತಿ ಸಿಬ್ಬಂದಿಯೂ ಪ್ರತಿದಿನ ಕಚೇರಿಗೆ ಹಾಜರಾದ ದಿನ ಮತ್ತು ಕಚೇರಿಯಿಂದ ವಾಪಾಸ್ಸು ಹೋಗುವಾಗ ತನ್ನ ಬಳಿ ಇದ್ದ ಹಣದ ಮೊತ್ತವನ್ನು ನಗದು ಪುಸ್ತಕದಲ್ಲಿ ನಮೂದಿಸಬೇಕು. ಭ್ರಷ್ಟಾಚಾರವಿಲ್ಲದೆ ಪ್ರಾಮಾಣಿಕವಾಗಿ ಸರ್ಕಾರಿ ನೌಕರರು ಕೆಲಸ ನಿರ್ವಹಿಸ ಬೇಕಾಗಿದ್ದು, ಸಾರ್ವಜನಿಕರಿಗೆ ಭ್ರಷ್ಟಾಚಾರ ರಹಿತ ಉತ್ತಮ ಸೇವೆ ನೀಡಲು ಎಲ್ಲ ಅಧಿಕಾರಿಗಳು ಸಿಬ್ಬಂದಿಗಳು ಸಿದ್ಧರಾಗಬೇಕೆಂದು ಸೂಚನೆ ನೀಡಿದ್ರು…
ಬಳಿಕ ತಾಲೂಕಿನ ಸಾರ್ವಜನಿಕರಿಂದ ವಿವಿಧ ದೂರುಗಳನ್ನು ಸ್ವೀಕರಿಸಿ, ಕೆಲವು ದೂರುಗಳಿಗೆ ಸ್ಥಳದಲ್ಲೇ ಪರಿಹಾರವನ್ನು ನೀಡಲಾಯ್ತು. ಉಳಿದ ವಿವಿಧ ದೂರು ಅರ್ಜಿಗಳನ್ನು ಸ್ವೀಕರಿಸಿ ಪರಿಹರಿಸುವುದಾಗಿ ಲೋಕಾಯುಕ್ತ ಅಧಿಕಾರಿಗಳು ಭರವಸೆ ನೀಡಿದ್ರು..
ಈ ವೇಳೆ ಲೋಕಾಯುಕ್ತ ಸಿಪಿಐ ವಿನಾಯಕ್ ಬಿಲ್ಲವ, ತಹಶೀಲ್ದಾರ್ ಶೈಲೇಶ್ ಪರಮಾನಂದ್, ಪೌರಾಯುಕ್ತ ಆರ್.ಎಸ್.ಪವಾರ್, ಲೋಕಾಯುಕ್ತ ಸಿಬ್ಬಂದಿಗಳಾದ ರಫೀಕ್, ನಾರಾಯಣ, ಪ್ರದೀಪ್ ರಾಣೆ, ಕೃಷ್ಣ, ಆನಂದ್, ಸಂಜೀವ್, ಮೆಹಬೂಬ್ ಅಲಿ, ಮಹೇಶ್ ಮತ್ತು ಹಳಿಯಾಳ-ದಾಂಡೇಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ರು..
ಸಂದೇಶ್ ಜೈನ್, ನುಡಿಸಿರಿ ನ್ಯೂಸ್, ದಾಂಡೇಲಿ