ಹಳೆದಾಂಡೇಲಿಯ ಮಂಗಳಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮಕ್ಕೆ ಚಾಲನೆ

ದಾಂಡೇಲಿ : ನಗರದ ಹಳೆದಾಂಡೇಲಿಯಲ್ಲಿರುವ ಶ್ರೀ.ಮಂಗಳಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆಯನ್ನು‌ ನೀಡಲಾಯ್ತು.

ಒಂಬತ್ತು ದಿನಗಳವರೆಗೆ ಶ್ರೀ.ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಪೂಜಾರಾಧನೆಗಳು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ.

ಪೂಜಾ ಕಾರ್ಯಕ್ರಮದ ಯಶಸ್ಸಿಗೆ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಶ್ರಮಿಸುತ್ತಿದ್ದಾರೆ.