ಶೃಂಗೇರಿಯಲ್ಲಿ ನವರಾತ್ರಿ ವೈಭವ: 9 ದಿನವೂ ತಾಯಿಗೆ ವಿಶೇಷ ಅಲಂಕಾರ

ಚಿಕ್ಕಮಗಳೂರು,ಅ.21: ನವರಾತ್ರಿ ಭಾರತದಾದ್ಯಂತ ಹಿಂದೂಗಳು ಆಚರಿಸುವ ಬಹಳ ದೊಡ್ಡ ಹಬ್ಬ. ನಮ್ಮ ರಾಜ್ಯದಲ್ಲಂತೂ ದಸರಾವನ್ನ ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ. ಮೈಸೂರು ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯೂ ವಿಶೇಷವಾಗಿದೆ.

ಶ್ರೀ ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಪೀಠಗಳಲ್ಲಿ ಒಂದಾದ ಶೃಂಗೇರಿ ಶಾರದಾಂಬೆಯ ಸನ್ನಿಧಿ ಸಹ್ಯಾದ್ರಿ ಪರ್ವತಗಳ ತಪ್ಪಲಿನಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿದೆ. ತುಂಗಾ ನದಿ ತೀರದಲ್ಲಿ ವಾಸವಿರುವ ತಾಯಿ ಎಲ್ಲರ ಕಷ್ಟ ಪರಿಹರಿಸುತ್ತಿದ್ದಾಳೆ. ಮಕ್ಕಳ ವಿದ್ಯಾಭ್ಯಾಸದ ಆರಂಭಕ್ಕೂ ಮುನ್ನ ಪೋಷಕರು ತಾಯಿಯ ಆಶೀರ್ವಾದ ಪಡೆದು ಹೋಗುತ್ತಾರೆ.

ಶೃಂಗೇರಿಯಲ್ಲಿ ನವರಾತ್ರಿಯ ವೈಭವ

ಶೃಂಗೇರಿ ದೇವಸ್ಥಾನವು ವಿದ್ಯಾಧಿದೇವತೆಯ ನೆಲವೀಡು. ನವರಾತ್ರಿ ಉತ್ಸವದ ಸಂದರ್ಭದಲ್ಲಿ ಇಲ್ಲಿ ಶಾರದೆಗೆ ಚಂಡಿಕಾ ಹೋಮ, ರಥೋತ್ಸವ, ವಿವಿಧ ಅಲಂಕಾರ, ಪೂಜೆ ನಡೆಯುತ್ತದೆ. ಇಲ್ಲಿ ಶಾರದಾ ದೇವಿ ನವರಾತ್ರಿ ಉತ್ಸವಗಳಲ್ಲಿ ಸರಸ್ವತಿ, ದುರ್ಗಾ, ಲಕ್ಷ್ಮೀ ರೂಪದಲ್ಲಿ ಪೂಜಿಸಲ್ಪಡುತ್ತಾಳೆ.

ಶೃಂಗೇರಿಯಲ್ಲಿ ವಿಜೃಂಭಣೆಯಿಂದ ನಡೆಯುವ ಹಬ್ಬಗಳಲ್ಲಿ ನವರಾತ್ರಿ ಹಬ್ಬವೂ ಒಂದು. ಈ ಸುಸಂದರ್ಭದಲ್ಲಿ ಮಹಾಭಿಷೇಕ, ಶತರುದ್ರಾಭಿಷೇಕ ನಡೆಯುತ್ತದೆ. ಶಾರದೆಗೆ ಪ್ರತಿದಿನವೂ ಒಂದೊಂದು ಅಲಂಕಾರ ನಡೆಯುತ್ತದೆ. ಹಂಸವಾಹನ ಅಲಂಕಾರ, ವೃಷಭವಾಹನ ಅಲಂಕಾರ, ಮಯೂರವಾಹನ ಅಲಂಕಾರ, ಗರುಡವಾಹನ ಅಲಂಕಾರ, ಇಂದ್ರಾಣಿ ಅಲಂಕಾರ, ವೀಣಾಶಾರದಾ ಅಲಂಕಾರ, ಮೋಹಿನಿ ಅಲಂಕಾರ, ರಾಜರಾಜೇಶ್ವರಿ ಅಲಂಕಾರ, ಸಿಂಹವಾಹನ ಅಲಂಕಾರ, ಗಜಲಕ್ಷ್ಮೀ ಅಲಂಕಾರಗಳನ್ನು ಮಾಡಲಾಗುತ್ತದೆ.