ದಾಂಡೇಲಿ : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ತಪಾಸಣಾ ಶೆಡ್’ನಲ್ಲಿ ವೃದ್ಧರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ನಡೆದಿದೆ.
ನಗರದ ಮಾರುತಿ ನಗರದ ನಿವಾಸಿಯಾಗಿರುವ 80 ವರ್ಷ ವಯಸ್ಸಿನ ಲಗಮಪ್ಪ ಮಾರುತಿ ಕಾಂಬಳೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಇವರು ಮಾನಸಿಕವಾಗಿ ಸ್ವಲ್ಪ ಅಸ್ವಸ್ಥರಾಗಿದ್ದು ಜೊತೆಗೆ ಒಂದು ಕಾಲು ಗ್ಯಾಂಗ್ರಿನ್ ಗೆ ಒಳಗಾಗಿ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಶುಕ್ರವಾರ ಹೇಳಿ ಹೋದವರು ಮನೆಗೆ ಹಿಂದಿರುಗಿ ಬಂದಿರಲಿಲ್ಲ.
ಆದರೆ ಇಂದು ಶನಿವಾರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಕೋವಿಡ್ ತಪಾಸಣಾ ಶೆಡ್’ನಲ್ಲಿ ಲಗಮಪ್ಪ ಮಾರುತಿ ಕಾಂಬಳೆ ಅವರು ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ನಗರ ಠಾಣೆಯ ಪಿಎಸ್ಐ ಐ.ಆರ್.ಗಡ್ಡೇಕರ್ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದೆ.