ಮಂಗಳೂರು ಬಂದರಿನಲ್ಲಿ ಗುಂಡು ಹಾರಿಸಿಕೊಂಡು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ PSI ಆತ್ಮಹತ್ಯೆ

ಮಂಗಳೂರು, ಅ.22: ಗುಂಡು ಹಾರಿಸಿಕೊಂಡು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ PSI ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ನವ ಮಂಗಳೂರು ಬಂದರಿನ ಮುಖ್ಯ ದ್ವಾರದ ಬಳಿ ನಡೆದಿದೆ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ PSI ಝಾಕೀರ್ ಹುಸೇನ್(58) ತನ್ನದೇ ಸರ್ವಿಸ್ ರಿವಾಲ್ವರ್​​​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಯಚೂರು ಮೂಲದ ಝಾಕೀರ್​ ಮಂಗಳೂರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎನ್ಎಂಪಿಟಿ ಮುಖ್ಯದ್ವಾರದಲ್ಲಿ ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ರಾತ್ರಿಪಾಳಿ ಕೆಲಸ ಮುಗಿಸಿ ಬೆಳಗ್ಗೆ 6.30ಕ್ಕೆ ಶೌಚಾಲಯಕ್ಕೆ ಹೋಗಿದ್ದರು. ಶೌಚಾಲಯದಲ್ಲಿ​ ಪಿಸ್ತೂಲ್​​​​ನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.