ಜೋಯಿಡಾ ತಾಲ್ಲೂಕು ಕೇಂದ್ರದಲ್ಲಿರುವ ಅಗ್ನಿಶಾಮಕ ದಳದ ಕಾರ್ಯಾಲಯಲ್ಲಿ ಆಯುಧ ಪೂಜೆ

ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ಅಗ್ನಿಶಾಮಕ ದಳದ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಆಯುಧ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು.

ಅಗ್ನಿಶಾಮಕ ದಳದ ವಾಹನಕ್ಕೆ‌ ಪೂಜೆ ಸಲ್ಲಿಸುವುದರ ಜೊತೆಗೆ ತಾಲೂಕು ಆಸ್ಪತ್ರೆಯಲ್ಲಿರುವ ಆಂಬೆಲೆನ್ಸಿಗೂ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು, ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೋಯಿಡಾ ತಾಲೂಕು ಕೇಂದ್ರದಲ್ಲಿರುವ ಅಗ್ನಿಶಾಮಕ ದಳದ ಕಾರ್ಯಾಲಯದಲ್ಲಿ ಪ್ರತಿ ವರ್ಷವೂ ಆಯುಧ ಪೂಜೆಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.