ಯಲ್ಲಾಪುರದ ಸರ್ಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರ ವಿರುದ್ಧ ಮುಂದುವರೆದ ಪ್ರತಿಭಟನೆ



ಯಲ್ಲಾಪುರ :- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮುಂದುವರಿಸಿದ್ರು. ಈ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಮನವೊಲಿಸಿ, ಪ್ರತಿಭಟನೆ ಹಿಂಪಡೆಯುವಂತೆ ಮಾಡಿದ್ರು..

ಪ್ರಾಂಶುಪಾಲರಿಂದ ಉಂಟಾಗುತ್ತಿರುವ ಕಿರಿಕಿರಿ ಕುರಿತು ಉಪನ್ಯಾಸಕರಿಂದ, ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಶಿವರಾಮ್‌ ಹೆಬ್ಬಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಕಾಲೇಜಿನಲ್ಲಿ ಏನೇ ಸಮಸ್ಯೆಗಳಿದ್ದರೂ ಕಾಲೇಜು ಅಭಿವೃದ್ಧಿ ಸಮಿತಿಯಲ್ಲಿ ಅದನ್ನು ಪ್ರಸ್ತಾಪಿಸಿ, ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಪ್ರತಿಭಟನೆಯೇ ಪರಿಹಾರವಲ್ಲ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೂ ಸಮಸ್ಯೆಯಾಗಬಹುದು, ಕಾಲೇಜಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದ್ರು..

ಖಾಯಂ ಪ್ರಾಂಶುಪಾಲರು ಇಲ್ಲದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ. ಉಪನ್ಯಾಸಕರ ಸಮಸ್ಯೆ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳುತ್ತೇನೆ ಎಂದು ಶಾಸಕರು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದು ವಿದ್ಯಾರ್ಥಿಗಳು ತರಗತಿಗೆ ಮರಳಿದ್ರು.

ಈ ವೇಳೆ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರಕಾಶ ಹೊಸ್ಮನಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀರಂಗ ಕಟ್ಟಿ, ದೇವಿದಾಸ್ ಶಾನಭಾಗ, ವಿಜಯ ಮಿರಾಶಿ, ಪ್ರಾಂಶುಪಾಲೆ ಭವ್ಯಾ ಉಪಸ್ಥಿತರಿದ್ರು.

ಶ್ರೀಧರ ಅಣಲಗಾರ್‌, ನುಡಿಸಿರಿ ನ್ಯೂಸ್‌, ಯಲ್ಲಾಪುರ