ಜಿ+2 ಆಶ್ರಯ ಮನೆ ವಿತರಣೆಗೆ ಆಗ್ರಹಿಸಿ‌ ನ:02 ರಿಂದ ನಗರ ಸಭೆಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ : ಅಧ್ಯಕ್ಷ ಅಕ್ರಂ ಖಾನ್

ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ 2 ಆಶ್ರಯ ಮನೆಗಳನ್ನು ಕೂಡಲೆ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕೂಡಲೆ ನಿವೇಶನವನ್ನು ಒದಗಿಸಿಕೊಡುವಂತೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯಿಂದ ಇದೇ ಬರುವ ನವೆಂಬರ್‌ 02ರಂದು ನಗರಸಭೆ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುವುದೆಂದು ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಅವರು ಹೇಳಿದರು.

ಅವರು ಇಂದು ಶುಕ್ರವಾರ ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ 2 ವಸತಿ ಪ್ರದೇಶದ ಮುಂಭಾಗದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಜಿ ಪ್ಲಸ್ 2 ಫಲಾನುಭವಿಗಳು ಉಪಸ್ಥಿತರಿದ್ದರು