ದಾಂಡೇಲಿ : ನಗರದ ಸಮೀಪದಲ್ಲಿರುವ ಕೇರವಾಡದ ಮನೆಯೊಂದರಲ್ಲಿ ಯುವಕನೋರ್ವ ನೇಣಿಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.
ಕೇರವಾಡ ಗ್ರಾಮದ ನಿವಾಸಿ 22 ವರ್ಷ ವಯಸ್ಸಿನ ನಿಖಿಲ್ ನಾಮದೇವ ಬೆಳಗಾಂವಕರ್ ಎಂಬಾತನೇ ನೇಣಿಗೆ ಶರಣಾದ ಯುವಕನಾಗಿದ್ದಾನೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾವುದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.