ಅಂಕೋಲಾ: ರವಿವಾರ ಬೆಳಿಗ್ಗೆ 11 ಗಂಟೆಗೆ ಅಂಕೋಲಾ ನಾಡವರ ಸಭಾಭವನದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ಮತ್ತು ಉತ್ತರ ಕನ್ನಡ ಜಿಲ್ಲೆಯ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸರ್ವರೂ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ ತಿಳಿಸಿದ್ದಾರೆ.
ಕಾನೂನು ಮತ್ತು ಸಂಸದೀಯ ಸಚಿವರಾದ ಎಚ್ ಕೆ ಪಾಟೀಲ,ಲೋಕೋಪಯೋಗಿ ಸಚಿವರು ಮತ್ತು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ, ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಸಚಿವ ಮಂಕಾಳು ವೈದ್ಯ, ಮಾಜಿ ಸಚಿವ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ, ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ , ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ ಸೈಲ್ ರವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಐಸಿಸಿ ಪದಾಧಿಕಾರಿಗಳು , ಕೆಪಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು ವಿಧಾನಸಭಾ ಅಭ್ಯರ್ಥಿಗಳು ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸದಸ್ಯರು, ಕೆಪಿಸಿಸಿ ನಿಯೋಜಿತ ಸಂಯೋಜಕರು,ಮಂಚೂಣಿ ಘಟಕ ಸೆಲ್ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರು,14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಾಲಿ ಹಾಗೂ ಮಾಜಿ ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿರಲು ಅವರು ವಿನಂತಿಸಿದ್ದಾರೆ