ದಾಂಡೇಲಿ : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಮ್ಮಿಕೊಂಡಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಭಾನುವಾರ ದಾಂಡೇಲಿ ನಗರದ ನಾಲ್ಕು ಪರೀಕ್ಷಾ ಕೇಂದ್ರಗಳಲಿ ಸ್ಪರ್ಧಾತ್ಮಕ ಪರೀಕ್ಷೆ ಯಶಸ್ವಿಯಾಗಿ ಜರುಗಿತು.
ದಾಂಡೇಲಿ ನಗರದ ಜನತಾ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಕಾಲೇಜಿನಲ್ಲಿ 130 ಅಭ್ಯರ್ಥಿಗಳ ಪೈಕಿ 62 ಅಭ್ಯರ್ಥಿಗಳು ಹಾಜರಾಗಿದ್ದರೆ, 68 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಅಂಬೇವಾಡಿಯಲ್ಲಿ 288 ಅಭ್ಯರ್ಥಿಗಳ ಪೈಕಿ 149 ಅಭ್ಯರ್ಥಿಗಳು ಹಾಜರಾಗಿ 139 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಕನ್ಯಾ ವಿದ್ಯಾಲಯದಲ್ಲಿ 120 ಅಭ್ಯರ್ಥಿಗಳ ಪೈಕಿ 66 ಅಭ್ಯರ್ಥಿಗಳು ಹಾಜರಾಗಿದ್ದು, 54 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಮತ್ತು ಬಂಗೂರುನಗರ ಜೂನಿಯರ್ ಕಾಲೇಜಿನಲ್ಲಿ 408 ಅಭ್ಯರ್ಥಿಗಳ ಪೈಕಿ 224 ಅಭ್ಯರ್ಥಿಗಳು ಹಾಜರಾಗಿದ್ದು, 184 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
ಈ ಸ್ಪರ್ಧಾತ್ಮಕ ಪರೀಕ್ಷೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಆಯಾಯ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು. ಪೊಲೀಸ್ ಇಲಾಖೆಯ ಭದ್ರತೆಯೊಂದಿಗೆ ಪರೀಕ್ಷೆ ನಡೆಯಿತು.