ದಾಂಡೇಲಿಯ ತಾಲೂಕು ಆಡಳಿತ ಸೌಧದಲ್ಲಿ ಇ-ಆಫೀಸ್ ತಂತ್ರಾಂಶ ಕೇಂದ್ರದ ಉದ್ಘಾಟನೆ

ದಾಂಡೇಲಿ : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಪಾರದರ್ಶಕ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಎಲ್ಲಾ ಕಚೇರಿಗಳಲ್ಲಿ ಇ ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಲು ಸ್ಪಷ್ಟ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನೂತನವಾಗಿ ಪ್ರಾರಂಭಿಸಲಾದ ಇ ಆಫೀಸ್ ಕಚೇರಿಯನ್ನು ಶಾಸಕರಾದ ಆರ್.ವಿ.ದೇಶಪಾಂಡೆ ಅವರು ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆಯವರು ಸಾರ್ವಜನಿಕರಿಗೆ ತ್ವರಿತವಾಗಿ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಅತೀ ಉಪಯುಕ್ತವಾದಂತಹ ಇ- ಆಫೀಸ್ ತಂತ್ರಾಂಶ ವಿಭಾಗವನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹ ಮತ್ತು ಶ್ಲಾಘನೀಯವಾಗಿದೆ. ನೂತನವಾಗಿ ಪ್ರಾರಂಭಿಸಲಾದ ಈ ಆಫೀಸ್ ಕಚೇರಿಯ ಉಪಯೋಗವನ್ನು ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಪಡೆದುಕೊಳ್ಳುವಂತೆ ಇದೇ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ಪೌರಾಯುಕ್ತರಾದ ಆರ್.ಎಸ್.ಪವಾರ್, ನಗರಸಭೆಯ ನಿಕಟಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಿಕಟಪೂರ್ವ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಆರ್ ಹೆಗಡೆ , ಕಾಂಗ್ರೆಸ್ ಮುಖಂಡರಾದ ಮುನ್ನ ವಹಾಬ್ , ಯುವ ಕಾಂಗ್ರೆಸ್ ಅಧ್ಯಕ್ಷ ಉಸ್ಮಾನ್ ಮುನ್ನ ವಹಾಬ್ , ಕಾಂಗ್ರೆಸ್ ಮುಖಂಡರುಗಳಾದ ಬಸೀರ್ ಗಿರಿಯಾಳ, ಅನ್ವರ್ ಪಠಾಣ್, ವಿಜಯಕುಮಾರ್, ಶಿವಪ್ಪ ನಾಯ್ಕ, ನಗರಸಭೆಯ ಸದಸ್ಯರು, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.