ಯಲ್ಲಾಪುರ: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಮಂಗಳವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಪಂಚಾಮೃತಾಭಿಷೇಕ, ಏಕಾದಶ ರುದ್ರಾಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.