ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ 2 ಆಶ್ರಯ ಮನೆಗಳನ್ನು ಕೂಡಲೆ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕೂಡಲೆ ನಿವೇಶನವನ್ನು ಒದಗಿಸಿಕೊಡುವಂತೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಆಶ್ರಯದಡಿ ಇಂದು ಗುರುವಾರ ದಾಂಡೇಲಿ ನಗರಸಭೆಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ವಿ. ಗಡೆಪ್ಪನವರ್ ಬೇಡಿಕೆ ಈಡೇರುವವರಿಗೆ ಹೋರಾಟ ನಿಲ್ಲದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು