ಜಿ+2 ಆಶ್ರಯ ಮನೆ ವಿತರಣೆ & ಕೆ.ಎಚ್.ಬಿ‌ ನಿವೇಶನಕ್ಕೆ ಆಗ್ರಹಿಸಿ‌ ದಾಂಡೇಲಿ ನಗರ ಸಭೆಯ ಮುಂಭಾಗ ಧರಣಿ ಸತ್ಯಾಗ್ರಹ : ಧರಣಿ ನಿರತರ ಜೊತೆ ಪೌರಾಯುಕ್ತರಿಂದ ಮಾತುಕತೆ

ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ 2 ಆಶ್ರಯ ಮನೆಗಳನ್ನು ಕೂಡಲೆ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕೂಡಲೆ ನಿವೇಶನವನ್ನು ಒದಗಿಸಿಕೊಡುವಂತೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಆಶ್ರಯದಡಿ ನಗರ ಸಭೆಯ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಇಂದು ಶುಕ್ರವಾರ ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಭೇಟಿ ನೀಡಿ ಧರಣಿ ನಿರತರ ಜೊತೆ ಮಾತುಕತೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಅವರು ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು