ಭಟ್ಕಳದಲ್ಲಿ ಬ್ರಷ್ಟಾಚಾರದ ವಿರುದ್ಧ ಜಾಗೃತಿ ಜಾಥಾ – ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಮೆರವಣಿಗೆ

ಭಟ್ಕಳ: ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಂದಾಯ ಇಲಾಖೆ, ಪುರಸಭೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ, ಪಟ್ಟಣ ಪಂಚಾಯತ್ ಜಾಲಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಸರಕಾರಿ ಇಲಾಖೆಗಳ ಸಹೋಗದೊಂದಿಗೆ ಬ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಬ್ರಷ್ಟಾಚಾರ ವಿರೋಧಿ ಸಪ್ತಾಹದ ಅಂಗವಾಗಿ ಇಲ್ಲಿನ ತಾಲೂಕಾ ಆಡಳಿತ ಸೌಧದಿಂದಲೇ ಮೆರವಣಿಗೆಯನ್ನು ನಡೆಸಲಾಯಿತು.
ತಾಲೂಕಾ ಆಡಳಿತ ಸೌಧದಲ್ಲಿ ಬ್ರಷ್ಟಾಚಾರ ವಿರೋಧಿ ಜನಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಡಾ. ನಯನಾ ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶೆ ಧನವತಿ, ಹೆಚ್ಚುವರಿ ನ್ಯಾಯಾಧೀಶ ಫವಾಜ್ ಪಿ.ಎ., ತಹಸೀಲ್ದಾರ್ ತಿಪ್ಪೇಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಗಣೇಶ ಎಂ. ದೇವಡಿಗ, ಪುರಸಭಾ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಂಜಪ್ಪ, ತಾಲೂಕಾ ಪಂಚಾಯತ್ ಅಧಿಕಾರಿ ಕರಿಯಪ್ಪ ನಾಯ್ಕ, ಪುರಸಭಾ ಹಿರಿಯ ಅರೋಗ್ಯಾಧಿಕಾರಿ ಸುಜಯಾ ಸೋಮನ್, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಶಂಶುದ್ಧೀನ್ ಶೇಖ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.