ಹೊನ್ನಾವರ: ತಾಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಹೊಸಗೋಡದಲ್ಲಿ ಅರಣ್ಯ ಸಿಬ್ಬಂದಿಗಳು ದೌರ್ಜನ್ಯ ಜರುಗಿಸಿದ ಸ್ಥಳಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ನಿಯೋಗವು ನವೆಂಬರ್ 8 ರಂದು ಮಧ್ಯಾಹ್ನ 2:30 ಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಸಂಚಾಲಕ ರಾಮ ಮರಾಠಿ ಯಲಕೊಟಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 20, 2023 ರಂದು ಹೊನ್ನಾವರ ತಾಲೂಕಿನ, ಚಿಕ್ಕನಗೋಡ ಗ್ರಾಮ ಪಂಚಾಯಿತಿಯ, ಹೊಸಗೋಡ ಗ್ರಾಮದ ಈಶ್ವರ ಗೌಡ ಅವರ ಅತಿಕ್ರಮಣ ಕ್ಷೇತ್ರದಲ್ಲಿ ಅರಣ್ಯ ಸಿಬ್ಬಂದಿಗಳು ದೌರ್ಜನ್ಯ ಜರುಗಿಸಿದ ಹಿನ್ನೆಲೆಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಜಿಲ್ಲಾ ಅಧ್ಯಕ್ಷ ರವೀಂದ್ರ ನಾಯ್ಕ ಹಾಗೂ ತಾಲೂಕ ಅಧ್ಯಕ್ಷ ಚಂದ್ರಕಾಂತ ಕೋಚರೆಕರ ಅವರ ನೇತ್ರತ್ವದಲ್ಲಿ ನಿಯೋಗವು ಸ್ಥಳಕ್ಕೆ ಭೇಟಿ ನೀಡಲಿದ್ದು, ಆಸಕ್ತರು ಪಾಲ್ಗೊಳ್ಳಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.