ಕುಮಟಾ ತಾಲೂಕಿನ ಹೆಗಡೆ ಗ್ರಾಮದ ಜನವಸತಿ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದು ತಾಲೂಕಿನ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಕುಮಟಾ ತಾಲೂಕಿನ ಹೆಗಡೆ ಗ್ರಾಮದ ಜನವಸತಿ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದು ತಾಲೂಕಿನ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ತಾಲೂಕಿನ ಹೆಗಡೆ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಹೆಗಡೆ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಗ್ರಾಮದ ಬಳಿ ಬೋನ್ ಇರಿಸಿದ್ದರು. ಡಿಆರ್‌ಎಫ್‌ಓ ರಾಘವೇಂದ್ರ ಹೂವಣ್ಣ ನೇತೃತ್ವದಲ್ಲಿ ಎರಡು ದಿನಗಳ ಕಾರ್ಯಾಚರಣೆ ಬಳಿಕ ಚಿರತೆ ಸೆರೆಸಿಕ್ಕಿದೆ.ಇತ್ತೀಚಿಗೆ ಕಾಡು ಪ್ರಾಣಿಗಳು ನಾಡಿನತ್ತ ಆಗಮಿಸುತ್ತಿದ್ದು, ತಾಲೂಕಿನ ಜನತೆಯಲ್ಲಿ ಆತಂಕ ಉಂಟು ಮಾಡಿತ್ತು. ಇದೀಗ ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದು ತಾಲೂಕಿನ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ..