ಮುರುಡೇಶ್ವರದ ಆರ್‌ಎನ್‌ಎಸ್‌ ಪ್ರಥಮ ದರ್ಜೆ ಕಾಲೇಜಿನಲ್ಲಿ ಫ್ರೇಶರ್ಸ್‌ ಡೇ – ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಶ್ರೀಧರ ಶೇಟ್‌ ಶಿರಾಲಿ

ಭಟ್ಕಳ ತಾಲೂಕಿನ ಮುರ್ಡೇಶ್ವರದ ಆರ್ ಎನ್ ಎಸ್ ಪ್ರಥಮ ದರ್ಜೆ ಕಾಲೇಜಿನ ಬಿಬಿಎ, ಬಿಕಾಮ್ ಮತ್ತು ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಫ್ರೆಶರ್ಸ್ ಡೇ – ನಿರಂತರ ‘ಕಾರ್ಯಕ್ರಮವನ್ನು ಸಾಹಿತಿ ಶ್ರೀಧರ ಶೇಟ್ ಶಿರಾಲಿ ಉದ್ಘಾಟಿಸಿದರು.
ಶ್ರಮ ಶ್ರದ್ಧೆಯಿಂದ ಅಧ್ಯಯನ ಮಾಡಿದರೆ ವಿದ್ಯಾರ್ಥಿಗಳು ಏನನ್ನು ಬೇಕಾದರೂ ಸಾಧಿಸಬಹುದು. ಯಶಸ್ಸು ಎನ್ನುವುದು ನಿರಂತರ ಪಯಣವಾಗಿದೆ.ಎಂದು ಸಾಹಿತಿ ಶ್ರೀಧರ ಶೇಟ್ ಶಿರಾಲಿ ಹೇಳಿದರು..
ಅವರು ಭಟ್ಕಳ ತಾಲೂಕಿನ ಮುರ್ಡೇಶ್ವರದ ಆರ್ ಎನ್ ಎಸ್ ಪ್ರಥಮ ದರ್ಜೆ ಕಾಲೇಜಿನ ಬಿಬಿಎ, ಬಿಕಾಮ್ ಮತ್ತು ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಫ್ರೆಶರ್ಸ್ ಡೇ – ನಿರಂತರ ‘ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರಬಂದು ಧನಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.ಯಶಸ್ಸು, ಏಳಿಗೆ ಬಯಸುವ ವ್ಯಕ್ತಿಗಳು ಆಲಸ್ಯ, ತೂಕಡಿಕೆ, ಭಯ, ಹೆದರಿಕೆ ಇವುಗಳ ಜೊತೆಗೆ ಮೊಬೈಲ್ ನ ಅತಿಯಾದ ಬಳಕೆಯಿಂದಲೂ ದೂರವಿರಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆರ್ ಎನ್ ಎಸ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಮತ್ತು ಪ್ರಾಂಶುಪಾಲ ದಿನೇಶ ಗಾಂವ್ಕರ್ ಮಾತನಾಡಿ ತಮ್ಮ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಭೆಗಳ ಅನಾವರಣಕ್ಕೂ ಉತ್ತೇಜನ ಮತ್ತು ಪ್ರೋತ್ಸಾಹ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಪ್ರಜ್ಞಾವಂತ ನಾಗರಿಕರಾಗಬೇಕು ಎಂದು ಹೇಳಿದರು.
ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕ ಮತ್ತು ಕನ್ನಡ ಉಪನ್ಯಾಸಕ ಗಣಪತಿ ಕಾಯ್ಕಿಣಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದುದ್ದಕ್ಕೂ ಸಾಧನೆಯ ನಿರಂತರತೆಯನ್ನು ಕಾಪಾಡಿಕೊಳ್ಳಬೇಕು ಎಂದು ನುಡಿದರು. ವೇದಿಕೆಯ ಮೇಲೆ ಎಚ್ ಓ ಡಿ ಗಣೇಶ ನಾಯ್ಕ, ಸಾಂಸ್ಕೃತಿಕ ಸಂಘದ ಸಹ ಸಂಚಾಲಕಿ ಜೆಸ್ಸಿಕಾ ಟೆಲಿಸ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಾಹಿತಿ ಶ್ರೀಧರ ಶೇಟ್ ಶಿರಾಲಿ ಮತ್ತು ಉಪನ್ಯಾಸಕ ಮತ್ತು ಯಕ್ಷಗಾನ ಕಲಾವಿದ ಗಣಪತಿ ಕಾಯ್ಕಿಣಿಯವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು. ನಂತರ ಹೊಸ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನೆಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಹಲವು ವಿದ್ಯಾರ್ಥಿಗಳು ನೃತ್ಯ ಮತ್ತು ಹಾಡುಗಾರಿಕೆಯ ಮೂಲಕ ತಮ್ಮ ಪ್ರತಿಭಾ ಪ್ರದರ್ಶನ ಮಾಡಿದರು.