ಜೋಯಿಡಾ ತಾಲೂಕಿನ ರಾಮನಗರದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಜೋಯಿಡಾ ತಾಲೂಕಿನ ರಾಮನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು..

ಜೋಯಿಡಾ ತಾಲೂಕಿನ ರಾಮನಗರದಲ್ಲಿ ಆಶ್ರಯದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಸಿವಿಲ್‌ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಶಿವರಾಯ ಎಸ್. ದೇಸಾಯಿ ಮಾತನಾಡಿ, ಪ್ರತಿಯೊಬ್ಬರು ಕಾನೂನಿನ ಬಗ್ಗೆ ಅರಿತುಕೊಂಡಾಗ ಮಾತ್ರ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ. ಮತ್ತು ವಿದ್ಯಾರ್ಥಿಗಳು ಕೂಡ ಕಾನೂನಿನ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ರು..

ಸುಮಾರು 5 ಸಾವಿರಕ್ಕೂ ಹೆಚ್ಚು ಕಾನೂನುಗಳನ್ನು ನಾವು ಪಾಲನೆ ಮಾಡ್ತಿದ್ದಿವಿ, ಆದ್ರೆ ಆ ಎಲಾ ಕಾನೂನುಗಳು ಬದಲಿಗೆ ನಮ್ಮ ಜೀವನದಲ್ಲಿ ಅವಶ್ಯವಿರುವ ಕನಿಷ್ಟ ಕಾನೂನುಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತಾಲೂಕು ಕಾನೂನು ಪ್ರಾಧಿಕಾರ ಕಾನೂನುಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು. ಕಾನೂನಿನ ಅರಿವಿನ ಜೊತೆಗ ನೆರವನ್ನು ನೀಡುತ್ತಿದೆ. 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ನೆರವು ನೀಡುತ್ತಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ರು..