ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿದ ನ್ಯೂ ಇಂಗ್ಲಿಷ್ ಸ್ಕೂಲ್ ನ ವಿದ್ಯಾರ್ಥಿಗಳು

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನ ವಿದ್ಯಾರ್ಥಿಗಳು ಕುಮಟಾದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಪ್ರದರ್ಶಿಸಿದ್ದಾರೆ.
ವಿವೇಕ ಜನಾರ್ಧನ ನಾಯ್ಕ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಧನ್ಯಾ ಪಟಗಾರ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾಳೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕ ಜಯಂತ ನಾಯಕ, ದೈಹಿಕ ಶಿಕ್ಷಣ ಶಿಕ್ಷಕ ಯಶ್ವಂತ ಮೇಸ್ತ, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಶುಭ ಹಾರೈಸಿದ್ದಾರೆ.