ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಣಿ ಅಪಘಾತ: ಮಕ್ಕಳು ಸೇರಿ 17 ಜನರಿಗೆ ಗಾಯ

ಕೋಲಾರ, ನ.14: ಕೋಲಾರ ತಾಲೂಕಿನ ಕೆಂದಟ್ಟಿ ಬಳಿ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ . ಹೌದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್ ವಾಹನ, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ. ಮೂವರ ಪರಿಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಲ್ಲರೂ ಆಂಧ್ರದ ಬಾಯಿಕೊಂಡ ಗಂಗಮ್ಮ ದೇಗುಲಕ್ಕೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.