ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಆಯೋಜಿಸಿರುವ ಅಮೃತ ಮಹೋತ್ಸವಕ್ಕೆ ಅಭಿಮಾನಿಗಳು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ದಾವಣಗೆರೆಯ ಹೊರವಲಯದ ಕುಂದವಾಡದ ಬಳಿ ಇರುವ ಶಾಮನೂರು ಅರಮನೆ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 12.30 ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಈಗಾಗಲೇ ರಾಜ್ಯದ ವಿವಿಧ ಕಡೆಗಳಿಂದ ಸುಮಾರ 5 ಲಕ್ಷಕ್ಕೂ ಅಧಿಕ ಜನ ಬರುವ ನಿರೀಕ್ಷೆ ಇದ್ದು ಭರ್ಜರಿ ತಯಾರಿ ಮಾಡಲಾಗಿದೆ. ಊಟೋಪಚಾರಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವಾರು ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಬೆಣ್ಣೆನಗರಿಯಲ್ಲಿ ಮಳೆ.! ಟ್ರಾಫಿಕ್ ಜಾಮ್.!
ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದದು ಮಳೆ ಕೊಂಚ ನಿರಾಸೆ ತರಸಿದೆ. ಈಗಾಗಲೇ ನಗರದಲ್ಲಿ ಜಿಟಿಜಿಟಿ ಮಳೆ ಪ್ರಾರಂಭವಾಗಿದೆ. ಇನ್ನು ಕಾರ್ಯಕ್ರಮಕ್ಕೆ ಬಂದಿರುವ ವಾಹನಗಳಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಸುಮಾರು 3 ಕಿ. ಮೀ. ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಸಿದ್ರಾಮಣ್ಣಂಗೆ ಜೈ.!
ಇನ್ನು ನೆರೆದಿರುವ ಅಭಿಮಾನಿಗಳು ಸಿದ್ದರಾಮಯ್ಯ ನವರಿಗೆ ಜೈಕಾರ ಹಾಕಿದ್ದಾರೆ. ಅಲ್ಲದೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭವಾಗಲಿ ಎಂಬ ಘೋಷಣೆಗಳು ಕೇಳಿ ಬರುತ್ತಿವೆ.