50ನೇ ಏಕದಿನ ಶತಕ; ಕ್ರಿಕೆಟ್ ದೇವರ ದಾಖಲೆ ಮುರಿದ ಕಿಂಗ್..!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಏಕದಿನ ಕ್ರಿಕೆಟ್​ನಲ್ಲಿ ಕಿಂಗ್​ ಕೊಹ್ಲಿ ಅವರ 50ನೇ ಶತಕವಾಗಿದ್ದು, ಈ ಮೂಲಕ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಅಗ್ರಸ್ಥಾನಕ್ಕೇರಿದ್ದಾರೆ. ಇದುವರೆಗೆ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿದವರ ಪೈಕಿ ತಲಾ 49 ಶತಕ ಸಿಡಿಸಿದ್ದ ಟೀಂ ಇಂಡಿಯಾದ ಮಾಜಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಜಂಟಿ ಅಗ್ರಸ್ಥಾನದಲ್ಲಿದ್ದರು. ಆದರೀಗ ಕಿವೀಸ್ ವಿರುದ್ಧ 50ನೇ ಶತಕ ಪೂರ್ಣಗೊಳಿಸಿರುವ ವಿರಾಟ್ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇದಲ್ಲದೆ ವಿಶ್ವಕ್ರಿಕೆಟ್​ನಲ್ಲಿ 50 ಏಕದಿನ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.