ರೋಚಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ನಾಲ್ಕನೇ ಬಾರಿಗೆ ವಿಶ್ವಕಪ್ ಫೈನಲ್ ತಲುಪಿದೆ. ಇದೀಗ ಫೈನಲ್ನಲ್ಲಿ ಟೀಂ ಇಂಡಿಯಾವನ್ನು ಎದುರಿಸಲು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಕೂಡ ಅಧಿಕೃತ ಟಿಕೆಟ್ ಪಡೆದುಕೊಂಡಿದೆ. ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಮೈದಾನ ಆತಿಥ್ಯವಹಿಸುತ್ತಿದೆ. ವಿಶ್ವದ ಅತ್ಯಂತ ದೊಡ್ಡ ಮೈದಾನದಲ್ಲಿ ಈ ಫೈನಲ್ ಪಂದ್ಯ ನಡೆಯುತ್ತಿರುವುದರಿಂದ ಇಡೀ ಕ್ರೀಡಾಂಗಣವೇ ಪ್ರೇಕ್ಷಕರಿಂದ ತುಂಬಿ ತುಳುಕುವುದು ಖಚಿತ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ದೇಶದ ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ಗೆ ಆಗಮಿಸುವ ಸಾಧ್ಯತೆ ಇದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 70 ರನ್ಗಳಿಂದ
ಮೋದಿ ತವರಿನಲ್ಲಿ ಫೈನಲ್
ದೈನಿಕ್ ಜಾಗರಣ್ ವರದಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ನ ಪ್ರಶಸ್ತಿ ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ. ಹಾಗೆಯೇ ಇದೇ ವೇಳೆ ವಿಶ್ವಕಪ್ನ ಸಮಾರೋಪ ಸಮಾರಂಭವೂ ಅದ್ಧೂರಿಯಾಗಿ ನಡೆಯಲಿದ್ದು, ಬಾಲಿವುಡ್ನ ಖ್ಯಾತ ತಾರೆಯರು ಅಭಿಮಾನಿಗಳನ್ನು ರಂಜಿಸಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಪ್ರಧಾನಿ ಮೋದಿ ಆಗಮನದ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ತವರು ನೆಲದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿರುವುದರಿಂದ ಪ್ರಧಾನಿ ಮೋದಿ ಅವರು ಈ ಪಂದ್ಯಕ್ಕೆ ಉಪಸ್ಥಿತರಾಗುವ ಸಾಧ್ಯತೆಗಳು ಹೆಚ್ಚಿವೆ.
ಕೊಹ್ಲಿ ಸಾಧನೆಗೆ ಪ್ರಧಾನಿ ಮೆಚ್ಚುಗೆ
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ 50ನೇ ಶತಕ ಸಿಡಿಸಿದಲ್ಲದೆ ಈ ದಾಖಲೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಕೂಡ ಎನಿಸಿಕೊಂಡರು. ಕೊಹ್ಲಿಯ ಈ ಐತಿಹಾಸಿಕ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಅವರು, ‘ಇಂದು ವಿರಾಟ್ ಕೊಹ್ಲಿ ತಮ್ಮ 50 ನೇ ಏಕದಿನ ಶತಕವನ್ನು ಬಾರಿಸಿದ್ದು ಮಾತ್ರವಲ್ಲದೆ, ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಅವರ ನಿರಂತರ ಸಮರ್ಪಣೆ ಮತ್ತು ಅಸಾಮಾನ್ಯ ಪ್ರತಿಭೆಗೆ ಸಾಕ್ಷಿಯಾಗಿದೆ. ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು
ಸೋಲಿಸುವ ಮೂಲಕ ಭಾರತ ತಂಡ ಫೈನಲ್ಗೆ ಟಿಕೆಟ್ ಗಿಟ್ಟಿಸಿಕೊಂಡಿದೆ. ಟೂರ್ನಿಯ ಅಂತಿಮ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇದೇ ಭಾನುವಾರ, ನವೆಂಬರ್ 19 ರಂದು ನಡೆಯಲಿದೆ.