ವಿಶ್ವಕಪ್ ಫೈನಲ್: ಪಂದ್ಯ ವೀಕ್ಷಿಸಲು ಬರಲು ಬರಲಿದ್ದಾರೆ ಮೋದಿ,ಆಸ್ಟ್ರೇಲಿಯಾ ಉಪ ಪ್ರಧಾನಿ

ದೆಹಲಿ ನವೆಂಬರ್ 18: ಟೀಂ ಇಂಡಿಯಾ ತಂಡವು ಭಾನುವಾರ (ನವೆಂಬರ್ 19) ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್‌ನಲ್ಲಿ ಆಸ್ಟ್ರೇಲಿಯನ್ನರನ್ನು ಎದುರಿಸುತ್ತಿರುವಾಗ, ಅದರ ಪ್ರಯತ್ನಗಳನ್ನು ಹುರಿದುಂಬಿಸಲು ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಕ್ಕೆ ಭಾರತದ ಪ್ರಧಾನಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಉಪಸ್ಥಿತರಿರುತ್ತಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ತಿಳಿಸಿದೆ.

ಗುಜರಾತ್ ಮುಖ್ಯಮಂತ್ರಿ ಶುಕ್ರವಾರ (ನವೆಂಬರ್ 17) ಅಹಮದಾಬಾದ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದು, ಭದ್ರತೆ, ಸಂಚಾರ ನಿರ್ವಹಣೆ, ಸ್ವಚ್ಛತೆ ಮತ್ತು ಹೆಚ್ಚಿನ ಅಂಶಗಳ ಸಮಗ್ರ ಪರಿಶೀಲನೆ ನಡೆಸಿದರು ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೂರು ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆತಿಥೇಯ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಜಯ ಸಾಧಿಸಿ ಫೈನಲ್ ಗೇರಿತ್ತು . ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್‌ನಲ್ಲಿ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಒಂಬತ್ತು ಪಂದ್ಯಗಳಲ್ಲಿ ಒಂಬತ್ತರಲ್ಲಿ ಗೆಲುವು ದಾಖಲಿಸಿ ಭಾರತ ಫೈನಲ್ ಪಂದ್ಯ ತಲಪಿದೆ, . ಹಲವಾರು ಪಂದ್ಯಗಳಲ್ಲಿ ಭಾರತದ ತಂಡವು ನಿರ್ಣಾಯಕ, ಪ್ರಶ್ನಾತೀತ ರೀತಿಯಲ್ಲಿ ಎದುರಾಳಿಗಳ ಮೇಲೆ ಪ್ರಾಬಲ್ಯ ಸಾಧಿಸಿತು. 18 ಅಂಕಗಳೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ 50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಸಿಡಿಸಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ 50 ಓವರ್‌ಗಳ ಅಂತ್ಯಕ್ಕೆ 397 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಪ್ರತ್ಯುತ್ತರವಾಗಿ, ನ್ಯೂಜಿಲೆಂಡ್ ಕೇವಲ 327 ರನ್ ಗಳಿಸಿತ್ತು. ಡ್ಯಾರಿಲ್ ಮಿಚೆಲ್ ಶತಕ ಬಾರಿಸಿದ್ದರು.