ಫೈನಲ್ ಪಂದ್ಯ ವೀಕ್ಷಿಸಲು ಅಹ್ಮದಾಬಾದ್​ಗೆ ಬಂದ ಸಾರಾ ತೆಂಡೂಲ್ಕರ್: ವೈರಲ್ ಆಗ್ತಿದೆ ವಿಡಿಯೋ

ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಈ ಅಂತಿಮ ರಣರೋಚಕ ಕದನಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ಸ್ಟೇಡಿಯಂಗೆ ಈಗಾಗಲೇ ಸಾವಿರಾರು ಜನರು ಬಂದು ಕಾಯುತ್ತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಈ ಪಂದ್ಯ ವೀಕ್ಷಣೆಗೆ ದಿಗ್ಗಜ ಆಟಗಾರರು, ಪ್ರಸಿದ್ಧ ನಟ-ನಟಿಯರು ಕೂಡ ಆಗಮಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಖಾಸಗಿ ಜೆಟ್‌ನಲ್ಲಿ ಅಹ್ಮದಾಬಾದ್​ಗೆ ತಲುಪಿದ್ದಾರೆ. ಇದರ ಬೆನ್ನಲ್ಲೇ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ. ಇವರು ಆಗಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸಾರಾ ತೆಂಡೂಲ್ಕರ್ 2023 ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಹಲವಾರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಅಂತೆಯೆ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ಕೂಡ ಬಂದಿದ್ದಾರೆ.