2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಂದು ಪ್ರಶಸ್ತಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತ ಹಾಗೂ ಪ್ಯಾಟ್ ಕಮ್ಮಿನ್ಸ್ ಅವರ ಆಸ್ಟ್ರೇಲಿಯಾ ತಂಡಗಳು ಸೆಣೆಸಾಟ ನಡೆಸಲಿವೆ. ಇಡೀ ಭಾರತವೇ ಟೀಮ್ ಇಂಡಿಯಾ ವಿಶ್ವಕಪ್ ಎತ್ತಿ ಹಿಡಿಯುವುದನ್ನು ನೋಡಲು ಕಾದು ಕುಳಿತಿದೆ. ಅಭಿಮಾನಿಗಳಂತು ದೊಡ್ಡ ಸಂಖ್ಯೆಯಲ್ಲಿ ಪಂದ್ಯ ವೀಕ್ಷಿಸಲು ತೆರಳುತ್ತಿದ್ದಾರೆ. ವಿಶ್ವಕಪ್ ಫೈನಲ್ ಕ್ರೇಜ್ ಎಷ್ಟಿದೆ ಎಂದರೆ ರಾತ್ರಿ 1 ಗಂಟೆಯ ಹೊತ್ತಿಗೆನೇ ನರೇಂದ್ರ ಮೋದಿ ಸ್ಟೇಡಿಯಂ ಬಳಿ ಫ್ಯಾನ್ಸ್ ಬಂದು ಕುಳಿತಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಹೌಸ್ಫುಲ್ ಆಗುವುದು ಖಚಿತವಾಗಿದ್ದು, ಟೀಮ್ ಇಂಡಿಯಾಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಗಲಿದೆ. ಸ್ಟೇಡಿಯಂ ಹೊರಗಡೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಭಾರತದ ಟೀ-ಶರ್ಟ್ ದಾಖಲೆ ಮಟ್ಟದಲ್ಲಿ ಸೇಲ್ ಆಗಿದೆಯಂತೆ.