ಮಂಗಳೂರು ನ.21: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾಟ್ಫಾರ್ಮ್ ನಿರ್ಮಾಣ ಕಾಮಗಾರಿ ಆರಂಭವಾದ ಹಿನ್ನೆಲ್ಲೆಯಲ್ಲಿ ನವೆಂಬರ್ 24 ಮತ್ತು 25 ರಂದು ಎರಡು ದಿನಗಳ ಕಾಲ ರೈಲು ಸೇವೆ ಸ್ಥಗಿತಗೊಳ್ಳಲಿದೆ. ನವೆಂಬರ್ 24ರ ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 06486 ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.
ರದ್ದಾಗುವ ರೈಲುಗಳು
- ರೈಲು ಸಂಖ್ಯೆ 06485 ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 06484 ಕಬಕ ಪುತ್ತೂರು-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಅನ್ನು ನವೆಂಬರ್ 25ರಂದು ಸಂಪೂರ್ಣ ರದ್ದುಗೊಳಿಸಲಾಗಿದೆ. ನವೆಂಬರ್ 24 ರಂದು ಮಡಗಾಂವ್ ಜಂಕ್ಷನ್ನಿಂದ ಹೊರಡುವ ರೈಲು ಸಂಖ್ಯೆ 10107 ಮಡಗಾಂವ್ ಜಂಕ್ಷನ್-ಮಂಗಳೂರು ಸೆಂಟ್ರಲ್ ಮೆಮು ಎಕ್ಸ್ಪ್ರೆಸ್ ಠೋಕೂರಿನಲ್ಲೇ ಕೊನೆಗೊಳ್ಳುತ್ತದೆ. ತೋಕೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ ರೈಲು ಭಾಗಶಃ ರದ್ದಾಗಲಿದೆ.
- ನವೆಂಬರ್ 24 ರಂದು ಮಡಗಾಂವ್ ಜಂಕ್ಷನ್ನಿಂದ ಹೊರಡುವ ರೈಲು ಸಂಖ್ಯೆ 06601 ಮಡಗಾಂವ್ ಜಂಕ್ಷನ್-ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ವಿಶೇಷ ರೈಲು, ಮಂಗಳೂರು ಜಂಕ್ಷನ್ನಲ್ಲೇ ಕೊನೆಗೊಳ್ಳುತ್ತದೆ. ರೈಲು ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಸೆಂಟ್ರಲ್ ನಡುವಿನ ರೈಲುಗಳು ಭಾಗಶಃ ರದ್ದುಗಲಿವೆ.
ರೈಲು ಕಾರ್ಯಾಚರಣೆಯಲ್ಲಿ ಬದಲಾವಣೆ
- ರೈಲು ಸಂಖ್ಯೆ 10108 ಮಂಗಳೂರು ಸೆಂಟ್ರಲ್-ಮಡ್ಗಾಂವ್ ಜಂಕ್ಷನ್ ಮೆಮು ಎಕ್ಸ್ಪ್ರೆಸ್ ನವೆಂಬರ್ 24 ರಂದು ಮಂಗಳೂರು ಸೆಂಟ್ರಲ್ ಬದಲಿಗೆ ತೋಕೂರು ನಿಲ್ದಾಣದಿಂದ ಹೊರಡಲಿದೆ. ಮಂಗಳೂರು ಸೆಂಟ್ರಲ್ ಮತ್ತು ತೋಕೂರ್ ನಡುವೆ ಸೇವೆಯನ್ನು ಭಾಗಶಃ ರದ್ದುಗೊಳಿಸಲಾಗುವುದು (ತೋಕೂರಿನಲ್ಲಿ ನಿರ್ಗಮನ ಸಮಯ ಸಂಜೆ 4.25)
- ರೈಲು ಸಂಖ್ಯೆ 22638 ಮಂಗಳೂರು ಸೆಂಟ್ರಲ್-ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ವೆಸ್ಟ್ ಕೋಸ್ಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ನವೆಂಬರ್ 24 ರಂದು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್ನಿಂದ ಹೊರಡಲಿದೆ. (ಮಂಗಳೂರು ಜಂಕ್ಷನ್ನಲ್ಲಿ ನಿಗದಿತ ನಿರ್ಗಮನ ಸಮಯ ರಾತ್ರಿ 11.45)
- ರೈಲು ಸಂಖ್ಯೆ 16610 ಮಂಗಳೂರು ಸೆಂಟ್ರಲ್-ಕೋಜಿಕೋಡ್ ಎಕ್ಸ್ಪ್ರೆಸ್ ನವೆಂಬರ್ 25 ರಂದು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್ನಿಂದ ಹೊರಡಲಿದೆ. (ಮಂಗಳೂರು ಜಂಕ್ಷನ್ನಲ್ಲಿ ನಿಗದಿತ ನಿರ್ಗಮನ ಸಮಯ ಬೆಳಗ್ಗೆ 5.15)
ಸಮಯ ಬದಲಾವಣೆ
- ರೈಲು ಸಂಖ್ಯೆ 06602 ಮಂಗಳೂರು ಸೆಂಟ್ರಲ್-ಮಡ್ಗಾಂವ್ ಜಂಕ್ಷನ್ ಎಕ್ಸ್ಪ್ರೆಸ್ ರೈಲು ನವೆಂಬರ್ 21, 22, 24 ಮತ್ತು 25 ರಂದು ಮಂಗಳೂರು ಸೆಂಟ್ರಲ್ನಿಂದ ಬೆಳಿಗ್ಗೆ 5.30ರ ಬದಲು (30 ನಿಮಿಷ ತಡವಾಗಿ) ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ.
- ರೈಲು ಸಂಖ್ಯೆ 16649 ಮಂಗಳೂರು ಸೆಂಟ್ರಲ್ – ನಾಗರ್ಕೋಯಿಲ್ ಜಂಕ್ಷನ್ ಎಕ್ಸ್ಪ್ರೆಸ್ ರೈಲು ನವೆಂಬರ್ 25 ರಂದು ಮಂಗಳೂರು ಸೆಂಟ್ರಲ್ನಿಂದ ಬೆಳಗ್ಗೆ 5.05ರ ಬದಲಾಗಿ (30 ನಿಮಿಷಗಳ ತಡವಾಗಿ) 5.35 ಕ್ಕೆ ಹೊರಡಲುತ್ತದೆ.
- ರೈಲು ಸಂಖ್ಯೆ 22637 ನವೆಂಬರ್ 24 ರಂದು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ನಿಂದ ಹೊರಡಲಿರುವ ಮಂಗಳೂರು ಸೆಂಟ್ರಲ್ ವೆಸ್ಟ್ ಕೋಸ್ಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಅನ್ನು ಮಾರ್ಗದಲ್ಲಿ 30 ನಿಮಿಷಗಳ ಕಾಲ ನಿಲ್ಲಿಸಲಾಗುತ್ತದೆ.