ಬೆಂಗಳೂರು, (ನವೆಂಬರ್ 21): ಮಠದ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮುರುಘಾಶ್ರೀ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚಿತ್ರದುರ್ಗ 2ನೇ ಜಿಲ್ಲಾ ನ್ಯಾಯಾಧೀಶರ ಮುಂದಿರುವ ಕೇಸ್ಗಳಿಗೆ ತಡೆ ನೀಡಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಮುರುಘಾ ಶರಣರಿಗೆ ಮತ್ತೊಂದು ಬಿಗ್ ರಿಲೀಫ್ ಸಿಕ್ಕಂತಾಗಿದೆ.