ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಬ್ಬರು ಹಾಗೂ ಒಡಿಶಾದಲ್ಲಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಪಶ್ಚಿಮ ಬಂಗಾಳದ ಬಂಕುರಾ ಮತ್ತು ಒಡಿಶಾದ ಜಾಜ್‌ಪುರದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.
ಘಟನೆಯ ನಂತರ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ರಾಹುಲ್ ಲೋಹರ್‌ನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆ ಮುಗಿಯುವವರೆಗೆ ವಿಷಯದ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.
ಒಡಿಶಾದ ಜಾಜ್‌ಪುರದಲ್ಲಿ, ಭಾನುವಾರ ರಾತ್ರಿ ಪಂದ್ಯ ಮುಗಿದ ಸ್ವಲ್ಪ ಸಮಯದ ನಂತರ ಮತ್ತೊಬ್ಬ 23 ವರ್ಷದ ದೇವ ರಂಜನ್ ದಾಸ್ ಬಿಂಜರ್‌ಪುರ ಪ್ರದೇಶದಲ್ಲಿ ತನ್ನ ಮನೆಯ ಟೆರೇಸ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿ ಎಮೋಷನಲ್ ಡಿಸ್ಆರ್ಡರ್ ಸಿಂಡ್ರೋಮ್ಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ನಾವು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜರಿ ಔಟ್‌ಪೋಸ್ಟ್‌ನ ಪ್ರಭಾರ ಅಧಿಕಾರಿ ಇಂದ್ರಮಣಿ ಜುವಾಂಗಾ ಹೇಳಿದರು. ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳಿಂದ ಸೋಲು ಅನುಭವಿಸಿತು.