ನಾನು ಡಿಕೆಶಿ ಒಟ್ಟಾಗಿದ್ದೇವೆ. ನಮ್ಮ ನಡುವೆ ಭಿನ್ನಮತವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ನಾನು ಡಿಕೆಶಿ ಒಟ್ಟಾಗಿದ್ದೇವೆ. ನಮ್ಮ ನಡುವೆ ಬಿರುಕಿದೆ ಎನ್ನುವುದು ಕೇವಲ ಬಿಜೆಪಿ ಹಾಗೂ ಮಾಧ್ಯಮಗಳ ಸೃಷ್ಠಿ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ. ಕೊಮುವಾದಿ ಬಿಜೆಪಿಯನ್ನು ಕಿತ್ತೊಗೆದು ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ. ಇಡೀ ದೇಶದಲ್ಲಿ ಹಿಂದುಳಿದವರಿಗೆ, ದಲಿತರಿಗೆ ಅನ್ಯಾಯ ಮಾಡಿದ್ದಾರೆ.. ಸಂವಿಧಾನಕ್ಕೆ ರಕ್ಷಣೆಯಿಲ್ಲ. ಹಿಂದೂ ರಾಷ್ಟç ಮಾಡಬೇಕು ಎನ್ನುವುದೇ ಬಿಜೆಪಿಯ ಗುರಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇನ್ನೂ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ವಚನ ಭ್ರಷ್ಟವಾಗಿದೆ. ಬಿಜೆಪಿ ಸರ್ಕಾರದ ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ದೇಶದ ಸಾಲ ಹೆಚ್ಚಾಗುವಲ್ಲಿ ಮೋದಿ ಪಾತ್ರ ದೊಡ್ಡದು. ಯುವಕರಿಗೆ ಉದ್ಯೋಗ ಕೊಡಲು ಇನ್ನೂ ಸಾಧ್ಯವಾಗಿಲ್ಲ. ಬೆಲೆ ಏರಿಕೆಯಿಂದ ದೇಶದ ಜನ ಹೈರಾಣಾಗಿದ್ದಾರೆ. ಇದೇನಾ ಅಛ್ಛೆದಿನ್ ಎಂದು ಪ್ರಶ್ನೆ ಮಾಡಿದರು. ರಾಹುಲ್ ಗಾಂಧಿ ಈ ದೇಶದ ಆಶಾಕಿರಣ. ಮೋದಿಯವರೇ ಕಾಂಗ್ರೆಸನ್ನು ನಿರ್ನಾಮ ಮಾಡಲು ನಿಮ್ಮಿಂದ ಸಾದ್ಯವಿಲ್ಲ ಎಂದು ಮೋದಿಯನ್ನು ತಿವಿದರು.