ವಿಶೇಷಚೇತನರಿಗೆ ಅನುಕಂಪಕ್ಕಿಂತ ಅವಕಾಶ ಕಲ್ಪಿಸುವದು ಅಗತ್ಯ. ಎನ್ ಜಿ ನಾಯಕ.


ಅಂಕೋಲಾ : ವಿಶೇಷ ಚೇತನರ ಬಗ್ಗೆ ಅನುಕಂಪಕ್ಕಿಂತ ಅವರಿಗೆ ಎಲ್ಲ ರಂಗಗಳಲ್ಲಿ ಅವಕಾಶ ಕಲ್ಪಿಸುವದು ಅಗತ್ಯ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ‌ ಆಡಳಿತದ ಉಪನಿರ್ದೇಶಕ ಎನ್ ಜಿ ನಾಯಕ ಹೇಳಿದರು. ಅವರು ಜಿಲ್ಲಾಡಳಿತ, ಜಿ‌ಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಕ್ರೀಡಾಂಗಣದಲ್ಲಿ ಜರುಗಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನರು ಸಾಮಾನ್ಯರೆಂದು ಪರಿಗಣಿಸಬೇಕಿಲ್ಲ ಅವರಲ್ಲೂ ಕೂಡ ಅಸಾಮಾನ್ಯ ಪ್ರತಿಭೆಗಳಿರುತ್ತವೆ. ಹೀಗಾಗಿ ಎಲ್ಲ ರಂಗಗಳಲ್ಲೂ ವಿಶೇಷ ಚೇತನರಿಗೂ ಮುಕ್ತ ಅವಕಾಶ ಕಲ್ಲಿಸಬೇಕು. ಇಲ್ಲಿ ಭಾಗವಹಿಸಿವ ವಿಶೇಷ ಚೇತನ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದವರೆಗೂ ತಲುಪುವಂತಾಗಲಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಕ್ರೀಡಾ ಜ್ಯೋತಿ ಗೌರವ ಸ್ವೀಕರಿಸಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ ಬಿ ಜಿ‌ ಕುಲಕರ್ಣಿ ಮಾತನಾಡಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಲತಾ ಎಂ ನಾಯಕ ಮಾತನಾಡಿ ವಿಶೇಷ ಚೇತನ ಮಕ್ಕಳ ಪಾಲಕರು ತಮ್ಮ ಮಕ್ಕಳ ಬಗ್ಗೆ ಸಾಧನೆಯ ಬಗ್ಗೆ ಕೀಳರಿಮೆಯನ್ನು ಬಿಟ್ಟು ಇತರ ಎಲ್ಲ ಮಕ್ಕಳ ಜೊತೆ ಭಾಗವಹಿಸಲು ಪ್ರೋತ್ಸಾಹ ನೀಡಬೇಕು. ವಿಶೇಷ ಚೇತನ ಮಕ್ಕಳಿಗೆ ಶಾಲೆಗಳಲ್ಲಿ ಸಮನ್ವಯ ಶಿಕ್ಷಣ ನೀಡಲಾಗುತ್ತಿದೆ. ಅವರನ್ನು ಎಲ್ಲರ ಜೊತೆ ಸಮಾನವಾಗಿ ಕಾಣುವದು ನಮ್ಮೆಲ್ಲರ ಕರ್ತವ್ಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಿವಾನಂದ ನಾಯಕ ವಂದಿಸಿದರು. ಶಿಕ್ಷಕ ರಾಜೇಶ ನಾಯಕ ಕಾರ್ಯಕ್ರಮ ನಿರ್ವಹಿಸಿದರು.


ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ, ಕಾರವಾರ ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ನಾಯಕ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದು ಗಾಂವಕರ, ಹೊನ್ನಾವರ ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀಧರ ನಾಯಕ, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ರಾಜ್ಯ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗಿರೀಶ, ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿಠೋಬ ನಾಯಕ, ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ ನಾಯಕ, ಕಾರವಾರ ತಾಲೂಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಯ ನಾಯಕ, ಜಿಲ್ಲಾ ಯುವಜನ ಉಪ ಸಮನ್ವಯಾಧಿಕಾರಿ ನಾಗರಾಜ ಗೌಡ, ಬಿಐಆರಸಿ ಬೀರಣ್ಣ ನಾಯಕ ಉಪಸ್ಥಿತರಿದ್ದರು.