ಅಂಕೋಲಾ: ಇಂದಿರಾ ಗಾಂಧಿಯವರು ಭಾರತದ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿ ಕೈಗೊಂಡ ಹಣಕಾಸು ಬ್ಯಾಂಕಿಂಗ್ ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿನ ಬೆಳವಣಿಗೆಯು ಇಂದಿಗೂ ಪ್ರತಿಬಿಂಬಿಸುತ್ತಿವೆ ಇಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ ಹೇಳಿದರು.
ಪಟ್ಟಣದ ಕಿತ್ತೂರು ರಸ್ತೆಯ ಅಂಚಿನ ಇಂದಿರಾ ಕ್ಯಾಂಟೀನ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆಯೋಜಿಸಿದ್ದ ಇಂದಿರಾಗಾಂಧಿಯವರ 106ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ ಮಾತನಾಡಿ, ಭಾರತದ ಮೊದಲ ಪ್ರಧಾನ ಮಂತ್ರಿ ಅವರ ಪುತ್ರಿಯದ ಇಂದಿರಾ ಗಾಂಧಿ ದೇಶದ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಹೆಸರಿನಲ್ಲಿ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಉಪಹಾರದ ಸೌಲಭ್ಯ ಒದಗಿಸಲಾಗಿದೆ. ಈ ಹಿನ್ನಲೆ ಇಂದಿರಾಗಾಂಧಿಯವರ ಜನ್ಮದಿನಾಚರಣೆಯನ್ನು ಇಂದಿರಾ ಕ್ಯಾಂಟೀನ್ ನಲ್ಲಿ ಹಮ್ಮಿಕೊಂಡಿದ್ದೇವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾಂಡುರಂಗ ಗೌಡ ಪ್ರಸ್ತಾವಿಕವಾಗಿ ಮಾತನಾಡಿ ಇಂದಿರಾ ಗಾಂಧಿಯವರ ಕೊಡುಗೆಗಳು ಮತ್ತು ರಾಜಕೀಯ ಜೀವನದ ಬಗ್ಗೆ ಮಾತನಾಡಿದರು.
ಪ್ರಮುಖರಾದ ಜಗದೀಶ ಖಾರ್ವಿ, ಸುರೇಶ ನಾಯ್ಕ, ಮಹೇಶ ಗೌಡ, ನಾರಾಯಣ ಶೆಟ್ಟಿ ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಲಕ್ಷ್ಮಿ ಮೊರಬಾ, ಸುಶೀಲಾ ಲಕ್ಷ್ಮೇಶ್ವರ್ ಮತ್ತಿತರರು ಇದ್ದರು.