ಹೊನ್ನಾವರ ತಾಲ್ಲೂಕಿನ ಮುಗ್ವಾ ಸುಬ್ರಹ್ಮಣ್ಯ ದೇವಸ್ಥಾನ …ಪಾಠ ಶಾಲೆ ಹತ್ತಿರ ಅಪಘಾತ .

ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಸುಬ್ರಹ್ಮಣ್ಯದ ಹುಲಿಯಪ್ಪನ ಕಟ್ಟೆಯ ಬಳಿ ಕಾರು ಮತ್ತು ಬೈಕ್ ನಡುವೆ ಶನಿವಾರ ಸಾಯಂಕಾಲ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಬೈಕ್‌ನ ಹಿಂಬದಿಗೆ ಕುಳಿತಿದ್ದ ಯುವತಿಯ ತಲೆ ಮತ್ತು ಮುಖಕ್ಕೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಬೇಟಿ ನೀಡಿದ್ದಾರೆ.