ಕೋಲಾರ: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ ಹತ್ಯೆ

ಕೋಲಾರ, ನ.26: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (48) ಹತ್ಯೆಯಾದ ಸೆಕ್ಯೂರಿಟಿ ಗಾರ್ಡ್.

ಆರೋಪಿಗಳು ಕೊಲೆ ಮಾಡಿದ ನಂತರ ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಸದ್ಯ, ಘಟನಾ ಸ್ಥಳಕ್ಕೆ ಆಗಮಿಸಿದ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರರಕಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.