ತಿರುಪತಿ ತಿಮ್ಮಪ್ಪನ ಮುಂದೆ 140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಅಭಿವೃದ್ಧಿ ನೀಡಲಿ ಎಂದು ಪ್ರಧಾನಿ ಪ್ರಾರ್ಥಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಆಂಧ್ರಪ್ರದೇಶದ ವಿಶ್ವವಿಖ್ಯಾತ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.
ಭಾನುವಾರ ತಿರುಪತಿ ತಲುಪಿದ ಪ್ರಧಾನಿ ಮೋದಿ ಅವರನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರು ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಇನ್ನು ಈ ಸಮಯದಲ್ಲಿ ತಿರುಪತಿ ತಿಮ್ಮಪ್ಪನ ಮುಂದೆ 140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಅಭಿವೃದ್ಧಿ ನೀಡಲಿ ಎಂದು ಪ್ರಾರ್ಥಿಸಿದರು.
140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಅಭಿವೃದ್ಧಿ ನೀಡಲಿ ಎಂದು ತಿರುಪತಿ ತಿಮ್ಮಪ್ಪನ ಮುಂದೆ ಪ್ರಾರ್ಥನೆ ಮಾಡಿದ್ದೇನೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಇದರ ಜತೆಗೆ ಪ್ರಧಾನಿ ಮೋದಿ ಅವರು ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಸಮಯದಲ್ಲಿ ತೆಲಂಗಾಣ ರಾಜ್ಯದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಆರ್‌ಎಸ್ ಪಕ್ಷ ಹಾಗೂ ತೆಲಂಗಾಣ ಅಡಳಿತರೂಢ ಸರ್ಕಾರ ರಾಜ್ಯದ ಜನರಿಗೆ ದ್ರೋಹ ಮಾಡಿದೆ. ನಿರ್ಮಲ್ ಜಿಲ್ಲೆಯಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಬಿಆರ್ ಎಸ್ ನಿಮಗೆ ದ್ರೋಹ ಬಿಟ್ಟು ಬೇರೇನೂ ನೀಡಿಲ್ಲ ಎಂದು ಹೇಳಿದ್ದಾರೆ.
ತೆಲಂಗಾಣ ಸಾವಿರಾರು ಕೋಟಿ ರೂಪಾಯಿ ಸಾಲದಲ್ಲಿದೆ.ಇಂದು ತೆಲಂಗಾಣ ಸಾವಿರಾರು ಕೋಟಿ ನೀರಾವರಿ ಹಗರಣಗಳಿಗೂ ಹೆಸರುವಾಸಿಯಾಗಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಪ್ರಧಾನಿ ಮೋದಿ ಅವರು, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ವಾಗ್ದಾಳಿ ತೆಲಂಗಾಣ ಸಿಎಂ ಅವರಿಗೆ ರಾಜ್ಯದ ಮಕ್ಕಳ ಬಗ್ಗೆ ಯಾವುದೇ ಕಾಳಜಿ ಇಲ್ಲ ಮತ್ತು ತಮ್ಮ ಸ್ವಂತ ಕುಟುಂಬ ಮತ್ತು ಮಕ್ಕಳ ಭವಿಷ್ಯದ ಬಗ್ಗೆ ಮಾತ್ರ ಚಿಂತಿಸುತ್ತಿದ್ದಾರೆ ಎಂದು ಹೇಳಿದರು.
ತೆಲಂಗಾಣದಲ್ಲಿ ನವೆಂಬರ್ 30ರಂದು ರಾಜ್ಯ ವಿಧಾನ ಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಇದೀಗ ಬಿಆರ್‌ಎಸ್ ಪಕ್ಷ ಪೈಪೋಟಿ ನೀಡಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷ ಭಾರೀ ಸಿದ್ಧತೆಗಳನ್ನು ನಡೆಸಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) 119 ಸ್ಥಾನಗಳಲ್ಲಿ 88 ಸ್ಥಾನಗಳನ್ನು ಗೆದ್ದು, ಒಟ್ಟು ಮತ ಹಂಚಿಕೆಯ ಶೇಕಡಾ 47.4 ರಷ್ಟು ಗಳಿಸಿತು. ಕಾಂಗ್ರೆಸ್ ಕೇವಲ 19 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿ ಶೂನ್ಯವನ್ನು ಗಳಿಸಿತು.