ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ಇಂದು ಅಂತಿಮ ತೆರೆ ಬಿದ್ದಿದೆ. ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ 5 ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಮರಳಿದ್ದಾರೆ. ಹಾಗೆಯೇ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಆರ್ಸಿಬಿ ಪಾಲಾಗಿದ್ದಾರೆ. ಈ ವಿಚಾರವನ್ನು ಸ್ವತಃ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯೇ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ
2022 ರ ಐಪಿಎಲ್ಗೂ ಮುನ್ನ ನಡೆದ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡ ಹಾರ್ದಿಕ್ ಪಾಂಡ್ಯ ಅವರನ್ನು 15 ಕೋಟಿ ರೂ.ಗೆ ಖರೀದಿಸಿತ್ತು. ಆ ಬಳಿಕ ಗುಜರಾತ್ ತಂಡದ ನಾಯಕತ್ವವಹಿಸಿಕೊಂಡ ಹಾರ್ದಿಕ್ ತಮ್ಮ ನಾಯಕತ್ವದಲ್ಲಿ, ಗುಜರಾತ್ ಟೈಟಾನ್ಸ್ ತಂಡವನ್ನು ಸತತ ಎರಡು ಆವೃತ್ತಿಗಳಿಗೆ ಫೈನಲ್ಗೆ ಕೊಂಡೊಯ್ದಿದ್ದರು. ಇದರಲ್ಲಿ ತಂಡವು 2022ರ ಐಪಿಎಲ್ನಲ್ಲಿ ಪ್ರಶಸ್ತಿ ಕೂಡ ಗೆದ್ದಿತ್ತು