ಉ.ಕ ಜಿಲ್ಲೆ ಕುಮಟಾ ಪಟ್ಟಣದ ಹೆಡ್ ಬಂದರ್‌ನಲ್ಲಿ ಯುವತಿಯೊರ್ವಳು ತನ್ನಿಬ್ಬರು ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸಾಂತಗಲ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ನಿವಾಸಿ ಎಂದು ಗುರುತಿಸಲಾಗಿದೆ. ನಿವೇದಿತಾ ಅವರು ಮನೆಯಿಂದ ಸ್ಕೂಟಿ ಮೇಲೆ ಇಬ್ಬರೂ ಗಂಡು ಮಕ್ಕಳನ್ನು ಕರೆದುಕೊಂಡು ಬಂದು, ಕುಮಟಾದ ಪಿಕ್‌ಅಪ್ ಬಸ್‌ನಿಲ್ದಾಣದ ಬಳಿ ಇಳಿಸಿದ್ದಾರೆ. ನಂತರ ನಿವೇದಿತಾ ಮಾಂಗಲ್ಯ, ಕಾಲುಂಗುರ, ಮೊಬೈಲ್ ಅನ್ನು ಸ್ಕೂಟಿಯಲ್ಲಿ ಇಟ್ಟು, ಹತ್ತಿರದಲ್ಲೇ ಇದ್ದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಿಳೆ ಸಮುದ್ರಕ್ಕೆ ಹಾರುವುದನ್ನು ಗಮನಿಸಿದ ಲೈಫ್‌ಗಾರ್ಡ್ ರಕ್ಷಣೆಗೆ ಮುಂದಾಗಿದ್ದರು. ಅಲೆಗಳ ಅಬ್ಬರ ಹೆಚ್ಚಿದ್ದ ಹಿನ್ನೆಲೆಯಲ್ಲಿ ನಿವೇದಿತಾ ಕಣ್ಮರೆಯಾಗಿದ್ದಾಳೆ. ಸ್ಥಳಕ್ಕೆ ಕುಮಟಾ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ.