ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಬೆಂಡಿಗೇರಿ ಪೆಟ್ರೋಲ್ ಬಂಕ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟಕಾ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ
ಪ್ರವೀಣ ಪಾಟೀಲ ಆರೋಪಿತನಾಗಿದ್ದಾನೆ. ಪಟ್ಟಣದ ಶಿರಸಿ ರಸ್ತೆಯ ಬೆಂಡಿಗೇರಿ ಪೆಟ್ರೋಲ್ ಬಂಕ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ರಸ್ತೆಯಲ್ಲಿ ಬರಹೋಗುವ ಜನರನ್ನು ಕೂಗಿ ಕರೆದು ಓಸಿ ದಂಧೆ ನಡೆಸುತ್ತಿದ್ದಾಗ ಖಚಿತ ಮಾಹಿತಿ ಮೇರಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಈತನಿಂದ ೧೪೫೦ ರೂ. ಓ.ಸಿ ಅಂಕೆ ಸಂಖ್ಯೆ ಬರೆದ ಚೀಟಿಯನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂಡಗೋಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.