ಬೆಂಗಳೂರು, ನ.29: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಶಾರಿಕ್ ಹಾಗೂ ಸಯ್ಯದ್ ಯಾಸೀನ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಶಂಕಿತ ಉಗ್ರರು ಕುಕ್ಕರ್ನಲ್ಲಿ IED ತೆಗೆದುಕೊಂಡು, ಆಟೋದಲ್ಲಿ ಹೋಗಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿದ್ದರು ಎಂದು ತಿಳಿದು ಬಂದಿದೆ.
ಪ್ರಪಂಚವನ್ನು ಇಸ್ಲಾಂ ಕರಣ ಮಾಡುವ ಉದ್ದೇಶ ಆರೋಪಿಗಳದ್ದು ಆಗಿತ್ತು
ಈ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಕೆದುಕುತ್ತಾ ಹೋದಷ್ಟು ಮತ್ತಷ್ಟು ಭಯಾನಕ ಸಂಗತಿಗಳು ಬಯಲಾಗುತ್ತಿವೆ. ಅದರಂತೆ ಇದೀಗ ಮಂಗಳೂರಿನ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆರೋಪಿಗಳು ಬಾಂಬ್ ಹಾಕಿ, ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನ ಮಾಡಿದ್ದರು. ಈ ಮೂಲಕ ಪ್ರಪಂಚವನ್ನು ಇಸ್ಲಾಂ ಕರಣ ಮಾಡುವ ಉದ್ದೇಶ ಆರೋಪಿಗಳದ್ದು ಆಗಿತ್ತು. ಆದರೆ, ಮಂಗಳೂರಿನಲ್ಲಿ ದಾರಿ ಮಧ್ಯೆಯಲ್ಲಿಯೇ ಈ ಕುಕ್ಕರ್ ಬ್ಲಾಸ್ಟ್ ಆಗಿತ್ತು.
ಪ್ರಕರಣದ ಹಿನ್ನೆಲೆ
ನವೆಂಬರ್ 19. 2022 ರಂದು ಮಂಗಳೂರಿನಲ್ಲಿ ಸ್ಫೋಟಗೊಂಡ ಬಾಂಬ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಫೋಟಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು ಈ ಸ್ಫೋಟದಿಂದ ಬಯಲಾಗಿತ್ತು. ಅಲ್ಲದೆ, ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ಬಂಧನವಾಗುತ್ತಿದ್ದಂತೆ ಶಾರೀಕ್ ಅಲ್ಲಿಂದ ಪರಾರಿಯಾಗಿ ಮಂಗಳೂರು, ಮೈಸೂರು, ಕೇರಳ, ತಮಿಳುನಾಡು ಸುತ್ತಾಡಿಕೊಂಡಿದ್ದ. ಹಿಂದೂ ವೇಶ ಧರಿಸಿ ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿಂದ ತನ್ನ ಉಗ್ರ ಕೃತ್ಯ ಮುಂದುವರೆಸಿದ್ದ.